ಚಿತ್ರದುರ್ಗ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ ಅಮಾನತಿನಲ್ಲಿಡುವಂತೆ ಒತ್ತಾಯ – chitradurga Odanadi Organization Demand for suspension of Chitradurga Child Rights Protection Committee chitradurga news in kannada


ಮುರುಘಾ ಮಠದ ವಸತಿ ಶಾಲೆಯ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವನ್ನು ಸಿಬಿಐ ಅಥವಾ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸುವಂತೆ ಒಡನಾಡಿ ಸಂಸ್ಥೆ ಮುಖ್ಯಸ್ಥ ಸ್ಟ್ಯಾನ್ಲಿ ಒತ್ತಾಯಿಸಿದ್ದಾರೆ.

ಚಿತ್ರದುರ್ಗ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ ಅಮಾನತಿನಲ್ಲಿಡುವಂತೆ ಒತ್ತಾಯ

ಚಿತ್ರದುರ್ಗ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ ಅಮಾನತಿನಲ್ಲಿಡುವಂತೆ ಒತ್ತಾಯ


ಮೈಸೂರು: ಮುರುಘಾ ಮಠದ (Murugha Mutt) ವಸತಿ ಶಾಲೆಯ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ (Sexual assault) ಎಸಗಿದ ಪ್ರಕರಣವನ್ನು ಸಿಬಿಐ ಅಥವಾ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸುವಂತೆ ಒಡನಾಡಿ ಸಂಸ್ಥೆ ಮುಖ್ಯಸ್ಥ ಸ್ಟ್ಯಾನ್ಲಿ ಒತ್ತಾಯಿಸಿದ್ದಾರೆ. ಮೈಸೂರಿನಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಮಕ್ಕಳ ಮೇಲೆ ಪೋಷಕರಿಂದಲೇ ಒತ್ತಡ ಹೇರಲಾಗುತ್ತಿದೆ. ಚಿತ್ರದುರ್ಗ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ (Child Rights Protection Committee)ಯನ್ನು ಅಮಾನತಿನಲ್ಲಿಡಬೇಕು. ಇದು ಪ್ರಕರಣದ ಮೊದಲ ದಿನದಿಂದ ಆರೋಪಿಗಳ ಪರ ಕೆಲಸ ಮಾಡುತ್ತಿದೆ. ಈ ಬಗ್ಗೆ ಒಂದು ವಾರದಲ್ಲಿ ಉತ್ತರ ನೀಡುವಂತೆ ರಾಜ್ಯ ಸಮಿತಿ ನೋಟಿಸ್ ಕೂಡ ನೀಡಿದೆ. ಬಾಲ ಮಂದಿರದಲ್ಲಿದ್ದಾಗಲೇ ಬಾಲಕಿ ಮೇಲೆ ತಂದೆಯಿಂದ ಒತ್ತಡ ಹೇರಲಾಗಿದೆ. ಬಾಲಮಂದಿರದ ಸಿಬ್ಬಂದಿ ಸಹ ಇದನ್ನು ಕೇಳಿಸಿಕೊಂಡಿದ್ದಾರೆ. ಹೀಗಾಗಿ ಸರ್ಕಾರವು ಪ್ರಕರಣವನ್ನು ಇನ್ನಷ್ಟು ಗಂಭೀರವಾಗಿ ಪರಿಗಣಿಸಿ ಎಲ್ಲರನ್ನೂ ವಿಚಾರಣೆ ಮಾಡಿ ಸತ್ಯಾಂಶ ಹೊರ ತರಬೇಕು ಎಂದು ಒತ್ತಾಯಿಸಿದರು.

ಒಡನಾಡಿ ಸೇವಾಸಂಸ್ಥೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಆರೋಪಿಗಳ ಮಂಪರು ಪರೀಕ್ಷೆ ನಡೆಸುವಂತೆ ಆಗ್ರಹಿಸಿ ಒಡನಾಡಿ ಸೇವಾಸಂಸ್ಥೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಮೈಸೂರಿನ ನ್ಯಾಯಾಲಯದ ಬಳಿ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಧರಣಿ ನಡೆಸಿದ ಪ್ರತಿಭಟನಾಕಾರರು, ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಸಮಗ್ರ ತನಿಖೆಯಾಗಬೇಕು, ಕರ್ತವ್ಯ ಲೋಪವೆಸಗಿರುವ ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಬೇಕು, ಸಂತ್ರಸ್ತ ಮಕ್ಕಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿದರು.

TV9 Kannada


Leave a Reply

Your email address will not be published.