ಚಿತ್ರದುರ್ಗ: ವಾಕಿಂಗ್ ಮುಗಿಸಿ ಮನೆಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ಡಿವೈಎಸ್​ಪಿ ಸಾವು | DYSP died by heart attack in Chitradurga


ಚಿತ್ರದುರ್ಗ: ವಾಕಿಂಗ್ ಮುಗಿಸಿ ಮನೆಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ಡಿವೈಎಸ್​ಪಿ ಸಾವು

ರಮೇಶ (52)

ಚಿತ್ರದುರ್ಗ: ಹೃದಯಾಘಾತದಿಂದ ಡಿವೈಎಸ್​ಪಿ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ವಾಕಿಂಗ್ ಮುಗಿಸಿ ಮನೆಗೆ ತೆರಳಿದ್ದ ವೇಳೆ ಧೀಡಿರ್ ಕುಸಿದು ಬಿದ್ದಿದ್ದ ಡಿವೈಎಸ್​ಪಿ ರಮೇಶ (52) ಅವರನ್ನು ತಕ್ಷಣವೇ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಡಿಸಿಆರ್​ಬಿ ಮತ್ತು ಡಿವೈಎಸ್​ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ್, 1998 ಬ್ಯಾಚ್​ನಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಸದ್ಯ ಬಸವೇಶ್ವರ ಆಸ್ಪತ್ರೆಗೆ ಎಸ್​ಪಿ ಜಿ.ರಾಧಿಕಾ ಭೇಟಿ ನೀಡಿದ್ದಾರೆ.

ಇದನ್ನೂ ಓದಿ:
ಕ್ಯಾಬ್ ಡ್ರೈವರ್​ಗಳಲ್ಲಿ ಹೃದಯಾಘಾತ ಹೆಚ್ಚುತ್ತಿರುವುದಕ್ಕೆ ಅವರ ಜೀವನಶೈಲಿ ಕಾರಣ: ಡಾ ರಾಹುಲ ಪಾಟೀಲ್

TV9 Kannada


Leave a Reply

Your email address will not be published. Required fields are marked *