ಬೆಂಗಳೂರು: ಅಕಾಲಿಕ ನಿಧನ ಹೊಂದಿದ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಶ್ರದ್ಧಾಂಜಲಿ ಸಲ್ಲಿಸುವುದಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತಿಳಿಸಿದೆ.
ಇದೇ ಭಾನುವಾರ ಸಂಜೆ 6 ಗಂಟೆಗೆ ರಾಜ್ಯದ ಎಲ್ಲಾ ಚಿತ್ರಮಂದಿರಗಳ ಮುಂದೆ ದೀಪ ಬೆಳಗಿಸೋ ಮೂಲಕ ಅಗಲಿದ ನಟನಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸೋದಾಗಿ ಮಂಡಳಿ ತಿಳಿಸಿದೆ. ಕರ್ನಾಟಕ ಚಲನಚಿತ್ರ ಪ್ರದರ್ಶಕರ ಮಹಾಮಂಡಳ. ಕರ್ನಾಟಕ ಚಿತ್ರ ಪ್ರದರ್ಶಕರ ಸಂಘ ಜಂಟಿಯಾಗಿ ಈ ಕಾರ್ಯಕ್ಕೆ ಸಾಥ್ ನೀಡಿವೆ.
ಏಕ ಕಾಲಕ್ಕೆ ಎಲ್ಲಾ ಚಿತ್ರಮಂದಿರಗಳ ಮುಂದೆ ಅಪ್ಪುಗೆ ಚಿತ್ರಮಂದಿರಗಳ ಮಾಲೀಕರು, ಪ್ರೇಕ್ಷಕರು, ಅಭಿಮಾನಿಗಳಿಂದ ಶ್ರದ್ಧಾಂಜಲಿ, ಪುಷ್ಪಾಂಜಲಿ, ಗೀತಾಂಜಲಿ, ಭಾಷ್ಪಾಂಜಲಿ ಮೂಲಕ ನಮನ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಂಡಳಿ ಮಾಹಿತಿ ನೀಡಿದೆ.