ಚಿನ್ನದ ವ್ಯಾಪಾರಿ ಕಂ ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಯುವತಿ ಜೊತೆ ರೆಡ್​ ಹ್ಯಾಂಡಾಗಿ ಸಿಕ್ಕಿ ಬಿದ್ರಾ ಜಗನ್ನಾಥ್ ಶೆಟ್ಟಿ..? | Big twist in BJP leader com Gold Merchant case of honey trap: Jagannath Shetty caught red handed with a young woman..?


ಮೈಸೂರಿನ ದರ್ಶನ್ ಲಾಡ್ಜ್​​ಗೆ ಏಕಾಏಕಿ ಸಲ್ಮಾ ಗ್ಯಾಂಗ್ ನುಗ್ಗಿದ್ದು, ಯುವತಿ ಜೊತೆ ರೆಡ್​ ಹ್ಯಾಂಡಾಗಿ ಚಿನ್ನದ ವ್ಯಾಪಾರಿ ಕಂ ಬಿಜೆಪಿ ಮುಖಂಡ ಜಗನ್ನಾಥ್ ಶೆಟ್ಟಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗುತ್ತಿದೆ.

ಚಿನ್ನದ ವ್ಯಾಪಾರಿ ಕಂ ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಯುವತಿ ಜೊತೆ ರೆಡ್​ ಹ್ಯಾಂಡಾಗಿ ಸಿಕ್ಕಿ ಬಿದ್ರಾ ಜಗನ್ನಾಥ್ ಶೆಟ್ಟಿ..?

ಚಿನ್ನದ ವ್ಯಾಪಾರಿ ಕಂ ಬಿಜೆಪಿ ಮುಖಂಡ ಜಗನ್ನಾಥ್ ಶೆಟ್ಟಿ

TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Sep 08, 2022 | 8:48 AM
ಮಂಡ್ಯ: ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, FIRನಲ್ಲಿ ಉಲ್ಲೇಖಿಸಿದ ಅಂಶವೇ ಬೇರೆ ಅಸಲಿಗೆ ನಡೆದಿದ್ದೆ ಬೇರೆ. ಟಿವಿ9ಗೆ ಕೃತ್ಯ ನಡೆದ ದಿನದ ಎಕ್ಸ್​​ಕ್ಲೂಸಿವ್ ವಿಡಿಯೋ ಸಿಕ್ಕಿದೆ. ಮೈಸೂರಿನ ದರ್ಶನ್ ಲಾಡ್ಜ್​​ಗೆ ಏಕಾಏಕಿ ಸಲ್ಮಾ ಗ್ಯಾಂಗ್ ನುಗ್ಗಿದ್ದು, ಯುವತಿ ಜೊತೆ ರೆಡ್​ ಹ್ಯಾಂಡಾಗಿ ಚಿನ್ನದ ವ್ಯಾಪಾರಿ ಕಂ ಬಿಜೆಪಿ ಮುಖಂಡ ಜಗನ್ನಾಥ್ ಶೆಟ್ಟಿ ಸಿಕ್ಕಿಬಿದ್ದಿದ್ದಾರೆ. ಕಾಲೇಜ್ ಲೆಕ್ಚರರ್ ಎಂದು ಲಾಡ್ಜ್​​ನಲ್ಲಿದ್ದು, ಯುವತಿ ಜೊತೆ ಜಗನ್ನಾಥ ಇರುವ ವಿಚಾರ ತಿಳಿದು ಅಲರ್ಟ್ ಆದ ಸಲ್ಮಾ ಗ್ಯಾಂಗ್​​ ತಕ್ಷಣ ಮೈಸೂರಿನ ದರ್ಶನ್ ಲಾಡ್ಜ್​ಗೆ ನುಗ್ಗಿದ್ದಾರೆ. ಒಳ ನುಗ್ಗುತ್ತಿದ್ದಂತೆ ಗ್ಯಾಂಗ್ ವಿಡಿಯೋ ಚಿತ್ರೀಕರಣ ಮಾಡಿದ್ದು, ಯುವತಿ, ಜಗನ್ನಾಥ ಶೆಟ್ಟಿಗೆ ಮನಬಂದಂತೆ ಥಳಿಸಿದ್ದಾರೆ. ಸದ್ಯ ಜಗನ್ನಾಥ ಶೆಟ್ಟಿ ನಡೆ ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಮೂವರು ಆರೋಪಿಗಳನ್ನು ಪೊಲೀಸರು ಜೈಲಿಗಟ್ಟಿದ್ದು, ಮಂಡ್ಯ ಪಶ್ಚಿಮ ವಿಭಾಗ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ತಾಜಾ ಸುದ್ದಿ

TV9 Kannada


Leave a Reply

Your email address will not be published.