ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ತಾವು ಪ್ರತಿನಿಧಿಸುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ, ಕೋವಿಡ್ ಸೋಂಕಿಗೊಳಗಾಗಿ ಮೃತಮಟ್ಟವರ ಕುಟುಂಬಕ್ಕೆ ₹1 ಲಕ್ಷ ಪರಿಹಾರ ನೀಡುವುದಾಗಿ ಇಂದು ಪ್ರಕಟಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಸುಧಾಕರ್​​.. ಮೃತಪಟ್ಟವರ ಕುಟುಂಬಕ್ಕೆ‌ ತೆರಳಿ ಸಾಂತ್ವನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ, ಜೊತೆಗೆ ಪರಿಹಾರವನ್ನೂ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಶ್ರೀ ಸಾಯಿ ಕೃಷ್ಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪರಿಹಾರ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಮೃತರಿಗೆ ಪರಿಹಾರ ನೀಡಲು ಡಾ.ಸುಧಾಕರ್​ ಅವರು ‘ಜನಪ್ರತಿನಿಧಿಗಳ ಪರಿಹಾರ ನಿಧಿ’ಯ ಹಣವನ್ನ ಬಳಸಿಕೊಳ್ಳಲಿದ್ದಾರೆ. ಈ ಕಾರ್ಯದ ಜವಾಬ್ದಾರಿಯನ್ನ ಶ್ರೀ ಸಾಯಿ ಕೃಷ್ಣ ಚಾರಿಟೇಬಲ್ ಟ್ರಸ್ಟ್ ವಹಿಸಿಕೊಳ್ಳಲಿದೆ.

The post ಚಿ. ಬಳ್ಳಾಪುರದಲ್ಲಿ ಕೋವಿಡ್​​ನಿಂದ ಮೃತರಾದ ಕುಟುಂಬಕ್ಕೆ ₹1 ಲಕ್ಷ ಪರಿಹಾರ -ಸುಧಾಕರ್ ಘೋಷಣೆ appeared first on News First Kannada.

Source: newsfirstlive.com

Source link