ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ: ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಎಫ್​ಐಆರ್ ದಾಖಲು | Breaks election code of concuct: FIR registered against Higher Education Minister Ashwath Narayana


ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ: ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಎಫ್​ಐಆರ್ ದಾಖಲು

ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ

ಮಂಡ್ಯದ ಮಹಿಳಾ ಕಾಲೇಜು ಮತ್ತು ವೈದ್ಯಕೀಯ ಕಾಲೇಜಿನಲ್ಲಿ ಅಶ್ವತ್ಥ್ ನಾರಾಯಣ್ ಚುನಾವಣಾ ಪ್ರಚಾರ ನಡೆಸಿದ್ದು, ಸಚಿವರಿಂದಲೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದರಿಂದ ಅಶ್ವತ್ಥ್ ನಾರಾಯಣ್ ವಿರುದ್ಧ ಎಫ್​​ಐಆರ್​ ದಾಖಲಿಸಲಾಗಿದೆ.

ಮಂಡ್ಯ: ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆ ಮೇ 16 ರಂದು ಮಂಡ್ಯದ ಹಲವು ಕಾಲೇಜುಗಳಲ್ಲಿ ಸಚಿವ ಅಶ್ವತ್ಥ್ ನಾರಾಯಣ ಪಕ್ಷದ ಮುಖಂಡರ ಜೊತೆ ಪ್ರಚಾರ ಸಭೆ ನಡೆಸಿದ್ದರು. ಈ ಮೂಲಕ ಸಚಿವರಿಂದಲೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್​​ ದೂರು ನೀಡಿದ್ದರು. ಈ ಕಾರಣ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಮತ್ತು ಬಿಜೆಪಿ ಅಭ್ಯರ್ಥಿ ಎಂ.ವಿ.ರವಿಶಂಕರ್ ವಿರುದ್ಧ ಎಫ್​ಐಆರ್​​ ದಾಖಲಿಸಲಾಗಿದೆ. IPC ಸೆಕ್ಷನ್ 1860 ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1950, 1951 ಅಡಿ ಅಶ್ವತ್ಥ್ ನಾರಾಯಣ್ ವಿರುದ್ಧ ಕೇಸ್ ದಾಖಲಿಸಲಾಗಿದೆ. 1989ರ ಅಡಿ ಮಂಡ್ಯದ ಪೂರ್ವ ಠಾಣೆಯಲ್ಲಿ ನ್ಯಾಯಾಲಯದ ಆದೇಶದಂತೆ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ.​

TV9 Kannada


Leave a Reply

Your email address will not be published. Required fields are marked *