ಬೆಂಗಳೂರು: ಇಂದು ಕ್ಯಾಬಿನೆಟ್ ಸಭೆ ಕರೆದಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ 6 ತಿಂಗಳು ಯಾವುದೇ ಚುನಾವಣೆ ನಡೆಯುವುದಿಲ್ಲ.. ಈಗಾಗಲೇ ನಿಗದಿಯಾಗಿರುವ ಚುನಾವಣೆಗಳನ್ನು ಮುಂದೂಡುವಂತೆ ಶಿಫಾರಸು ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದರು.

ಈ ಬೆನ್ನಲ್ಲೇ ಇದೀಗ ರಾಜ್ಯ ಚುನಾವಣಾ ಆಯೋಗ 10 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು 2 ವಾರ್ಡ್​ಗಳ ಚುನಾವಣಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ನಿಗದಿಯಂತೆ ಇದೇ ತಿಂಗಳ 27 ರಂದು ಮತದಾನ ನಡೆಯಲಿದೆ ಎಂದು ಪ್ರಕಟಣೆ ಹೊರಡಿಸಿದೆ.

The post ಚುನಾವಣಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯಿಲ್ಲ- ರಾಜ್ಯ ಚುನಾವಣಾ ಆಯೋಗ appeared first on News First Kannada.

Source: News First Kannada
Read More