ನಿನ್ನೆ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಜಯದ ನಿರೀಕ್ಷೆಯಲ್ಲಿದ್ದ ಪ್ರಮುಖ ನಾಯಕರು ಸೋಲನ್ನಪ್ಪಿದ್ದಾರೆ. ಪ್ರಮುಖವಾಗಿ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪಕ್ಷ ಟಿಎಂಸಿ ಭರ್ಜರಿ ಗೆಲುವು ದಾಖಲಿಸಿದ್ರೂ ಸ್ವತಃ ಮಮತಾ ಬ್ಯಾನರ್ಜಿ ಅವರೇ ಸೋತಿರುವುದು ಅಚ್ಚರಿ ಮೂಡಿಸಿದೆ. ಕರ್ನಾಟಕ ಸಿಂಗಂ ಖ್ಯಾತಿಯ ಅಣ್ಣಾಮಲೈ ಚುನಾವಣೆಯಲ್ಲಿ ಸೋಲಿನ ಶಾಕ್​ಗೆ ಒಳಗಾಗಿದ್ದಾರೆ.

ಹೊಸ ಬದಲಾವಣೆ ತರುವ ವಿಶ್ವಾಸ ಮೂಡಿಸಿದ್ದ ನಟ ಕಮಲ್ ಹಾಸನ್ ತಮ್ಮ ಮೊದಲ ಪ್ರಯತ್ನದಲ್ಲಿ ವಿಫಲರಾಗಿದ್ದಾರೆ. ಆಂಧ್ರ ಪ್ರದೇಶದ ತಿರುಪತಿ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಕೂಡ ಸೋತಿದ್ದಾರೆ.

ಕೇರಳದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಭಾರೀ ನಿರೀಕ್ಷೆ ಮೂಡಿಸಿದ್ದ ಮೆಟ್ರೋ ಮ್ಯಾನ್ ಶ್ರೀಧರನ್‌ಗೆ ಸೋಲಾಗಿದೆ. ಹಾಗೇ ಇತ್ತೀಚೆಗಷ್ಟೇ ಬಿಜೆಪಿಗೆ ಸೇರಿದ್ದ ನಟಿ ಖುಷ್ಬೂ ಕೂಡ ಸೋತಿದ್ದಾರೆ.

The post ಚುನಾವಣೆಯಲ್ಲಿ ಜಯದ ನಿರೀಕ್ಷೆಯಲ್ಲಿದ್ದ ಪ್ರಮುಖ ನಾಯಕರಿಗೆ ಸೋಲು appeared first on News First Kannada.

Source: newsfirstlive.com

Source link