ಜಕ್ಕೂರು ಏರೋಡಂ ಜಾಗವನ್ನು ಖಾಸಗಿ ಕಂಪನಿಗೆ ಮಾರಾಟ ಮಾಡುವ ಆರೋಪ: ಲೋಕಾಯುಕ್ತದಲ್ಲಿ ದೂರು ದಾಖಲು | Raghavendra filled complaint against sports dept over allegations of plans to sell jakkur flying school property


ಜಕ್ಕೂರು ಏರೋಡಂ ಜಾಗವನ್ನು PPP ಮಾದರಿಯಲ್ಲಿ ಸರ್ಕಾರ ಖಾಸಗಿಗೆ ಮಾರುವ ಹುನ್ನಾರ ಮಾಡುತ್ತಿದೆ ಅಂತಾ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ ಆರೋಪ ಮಾಡಿದೆ.

ಜಕ್ಕೂರು ಏರೋಡಂ ಜಾಗವನ್ನು ಖಾಸಗಿ ಕಂಪನಿಗೆ ಮಾರಾಟ ಮಾಡುವ ಆರೋಪ: ಲೋಕಾಯುಕ್ತದಲ್ಲಿ ದೂರು ದಾಖಲು

ಸಂಗ್ರಹ ಚಿತ್ರ

ಬೆಂಗಳೂರು: ಜಕ್ಕೂರು ಫ್ಲೈಯಿಂಗ್ ಶಾಲೆಗಾಗಿ ಮೈಸೂರು ಮಹರಾಜರು ಕೊಟ್ಟ ಜಾಗವನ್ನು ಖಾಸಗಿ ಕಂಪನಿಗೆ ನೀಡಲು ಕ್ರೀಡಾ ಇಲಾಖೆ ಸಜ್ಜಾಗಿದೆ. 75 ಎಕ್ರೆ ಜಾಗವನ್ನು ಖಾಸಗಿಯವರಿಗೆ ನೀಡುವ ಹುನ್ನಾರದ ಬಗ್ಗೆ ಆರೋಪ ಕೇಳಿ ಬಂದಿದೆ.

1500 ಕೋಟಿ ಮೌಲ್ಯದ ಜಾಗ ಇದಾಗಿದ್ದು ಈ ವಿಚಾರದಲ್ಲಿ ತನಿಖೆ ಮಾಡುವಂತೆ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ ಲೋಕಾಯುಕ್ತಕ್ಕೆ ದೂರು ನೀಡಿದೆ. ಜಕ್ಕೂರು ಏರೋಡಂ ಜಾಗವನ್ನು PPP ಮಾದರಿಯಲ್ಲಿ ಸರ್ಕಾರ ಖಾಸಗಿಗೆ ಮಾರುವ ಹುನ್ನಾರ ಮಾಡುತ್ತಿದೆ ಅಂತಾ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ ಆರೋಪ ಮಾಡಿದೆ. ಅಲ್ಲದೆ ಈ ಬಗ್ಗೆ ಈಗಾಗಲೇ ರಾಜ್ಯಪಾಲರು, ಸರ್ಕಾರದ ಮುಖ್ಯ ಕಾರ್ಯದರ್ಶಿಗೂ ದೂರು ನೀಡಲಾಗಿದೆ.

TV9 Kannada


Leave a Reply

Your email address will not be published.