ಆಂಧ್ರಪ್ರದೇಶ: ತಿರುಪತಿಯಲ್ಲಿ ಆಕ್ಸಿಜನ್​ ಕೊರತೆಯಿಂದ 11 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊರೊನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ 11 ಮಂದಿಗೆ ಆಕ್ಸಿಜನ್ ಪೂರೈಕೆ ವ್ಯತ್ಯಯವಾದ ಹಿನ್ನೆಲೆ ಈ ದುರಂತ ಸಂಭವಿಸಿದೆ. ನಿನ್ನೆಯೂ ಸಹ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದರಿಂದ ಹಲವರು ಸಾವನ್ನಪ್ಪಿದ್ದರು.

ತಿರುಪತಿಯ ಎಸ್​ವಿಆರ್ ರೂಯಿಯಾ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು.. ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಹರಿ ನಾರಾಯಣ್, ಚೆನ್ನೈನಿಂದ ಬರಬೇಕಿದ್ದ ಆಕ್ಸಿಜನ್ ಟ್ಯಾಂಕರ್ ತಲುಪುವುದು ವಿಳಂಬವಾದ ಕಾರಣ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವಾಗಿ ರೋಗಿಗಳು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆಂದು ಹೇಳಿದ್ದಾರೆ. ಇನ್ನು ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಅಲ್ಲಿನ ಮುಖ್ಯಮಂತ್ರಿ ಜಗನ್​ ಮೋಹನ್ ರೆಡ್ಡಿ 10 ಲಕ್ಷ ಪರಿಹಾರ ಘೋಷಿಸಿದ್ದಾರೆ.

 

The post ಜಗನ್ ರಾಜ್ಯದಲ್ಲಿ ಆಕ್ಸಿಜನ್​ಗೆ ಅಭಾವ: 20 ಕ್ಕೂ ಹೆಚ್ಚು ರೋಗಿಗಳು ಸಾವು appeared first on News First Kannada.

Source: newsfirstlive.com

Source link