ಮೈಸೂರು : ಐಎಎಸ್ ಅಧಿಕಾರಿಗಳ ನಡುವಿನ ವಾಕ್ಸಮರಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್‌ ಇಬ್ಬರನ್ನೂ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ಗೊಂದಲಕ್ಕೆ ತೆರೆ ಎಳೆದಿದೆ.

ಮೈಸೂರು ಡಿಸಿಯಾಗಿದ್ದ ರೋಹಿಣಿ ಸಿಂಧೂರಿಯವರನ್ನ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ವಾಣಿಜ್ಯ ತೆರಿಗೆ ಹೆಚ್ಚುವರಿ ಆಯುಕ್ತರಾಗಿದ್ದ ಡಾ.ಗೌತಮ್ ಬಗಾದಿಯವರನ್ನ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಇನ್ನು, ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ನಿರ್ದೇಶಕರಾಗಿ (ಇ– ಆಡಳಿತ) ವರ್ಗಾವಣೆ ಮಾಡಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಲಕ್ಷ್ಮೀಕಾಂತ ರೆಡ್ಡಿಯವರನ್ನ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಿಸಲಾಗಿದೆ.

The post ಜಟಾಪಟಿ ನಡೆಸಿದ್ದ ರೋಹಿಣಿ ಸಿಂಧೂರಿ, ಶಿಲ್ಪಾ ನಾಗ್‌ ಎತ್ತಂಗಡಿ appeared first on News First Kannada.

Source: newsfirstlive.com

Source link