ಜನ ಸೇವೆಯಲ್ಲಿರೋದನ್ನ ಬಯಸುತ್ತೇನೆ, ಅಧಿಕಾರವನ್ನಲ್ಲ -ಪ್ರಧಾನಿ ಮೋದಿ


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ಮನ್​ ಕೀ ಬಾತ್​ನಲ್ಲಿ ದೇಶವನ್ನ ಉದ್ದೇಶಿಸಿ ಮಾತನಾಡಿದರು. ಈ ವೇಳೆ 75ನೇ ಸ್ವಾತಂತ್ರ್ಯೋವದ ನೆನಪಿನಲ್ಲಿ ಆಚರಿಸುತ್ತಿರುವ ಅಮೃತ ಮಹೋತ್ಸವ ಕಾರ್ಯಕ್ರಮದ ಬಗ್ಗೆ ಪ್ರಸ್ತಾಪ ಮಾಡಿದರು.

ನಾನು ಜನರ ಸೇವೆಯಲ್ಲಿ ಇರಲು ಬಯಸುತ್ತೇನೆ.. ಅಧಿಕಾರವಲ್ಲ.. ನಾನು ಕೇವಲ ಜನರ ಸೇವಕ. ಗ್ರಾಮ ಪಂಚಾಯತ್​​ನಿಂದ ಹಿಡಿದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಡಿಸೆಂಬರ್ 16 ರಂದು ನೌಕಾಪಡೆಯ ದಿನ ಮತ್ತು ಸಶಸ್ತ್ರ ಪಡೆಗಳ ಧ್ವಜ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಇದೇ ವೇಳೆ ಅವರು ಹೇಳಿದರು.

ಅಮೃತ ಮಹೋತ್ಸವದ ಕಾರ್ಯಕ್ರಮಗಳು ದೇಶಕ್ಕಾಗಿ ಏನನ್ನಾದರೂ ಮಾಡಲು ನಮಗೆ ಸ್ಫೂರ್ತಿ ನೀಡುತ್ತದೆ. ಜನ ಸಾಮಾನ್ಯರಿಂದ ಹಿಡಿದು ಸರ್ಕಾರದ ಮಟ್ಟದವರೆಗೂ ಅಮೃತ ಮಹೋತ್ಸವ ನಡೆಯುತ್ತಿದೆ. ಈ ಉತ್ಸವದಲ್ಲಿ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

News First Live Kannada


Leave a Reply

Your email address will not be published. Required fields are marked *