ಜಮ್ಮು-ಕಾಶ್ಮೀರದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ‘Axel’ ಸಾವು | Army dog Axel killed during encounter with terrorists in Jammu And Kashmir


ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ‘ಅಕ್ಸೆಲ್’ಸಾವನ್ನಪ್ಪಿದೆ. ಈ ಸಂದರ್ಭದಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಮೂವರು ಯೋಧರಿಗೆ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಜಮ್ಮು-ಕಾಶ್ಮೀರದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ‘Axel’ ಸಾವು

Dog

Image Credit source: NDTV

ಶ್ರೀನಗರ: ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ‘Axel’ಸಾವನ್ನಪ್ಪಿದೆ. ಈ ಸಂದರ್ಭದಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಮೂವರು ಯೋಧರಿಗೆ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಭಯೋತ್ಪಾದಕರು ಆಕ್ಸೆಲ್ ಮೇಲೆ ಗುಂಡು ಹಾರಿಸಿದಾಗ ಭಯೋತ್ಪಾದಕರು ಇರುವ ಸ್ಥಳವನ್ನು ಗುರುತಿಸಲು ಬಾಡಿಕ್ಯಾಮ್‌ಗಳನ್ನು ಅಳವಡಿಸಲಾಗಿರುವ ಸೇನೆಯ ಎರಡು ಸ್ನಿಫರ್ ಡಾಗ್‌ಗಳನ್ನು ಒಳಗೆ ಕಳುಹಿಸಲಾಯಿತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಒಬ್ಬ ಪಾಕಿಸ್ತಾನಿ ಪ್ರಜೆ ಸೇರಿದಂತೆ ಕನಿಷ್ಠ ಮೂವರು ಭಯೋತ್ಪಾದಕರು ಇರುವ ಬಗ್ಗೆ ಸುಳಿವು ಆಧರಿಸಿ ಪೊಲೀಸರು ಮತ್ತು ಸೇನೆಯು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.

ಭಯೋತ್ಪಾದಕರ ಚಲನವಲನವನ್ನು ಮೇಲ್ವಿಚಾರಣೆ ಮಾಡಲು, ಎರಡು ಸೇನಾ ನಾಯಿಗಳು- ಬಜಾಜ್ ಮತ್ತು ಆಕ್ಸೆಲ್- ಬಾಡಿಕ್ಯಾಮ್‌ಗಳನ್ನು ಧರಿಸಿ ಟಾರ್ಗೆಟ್ ಹೌಸ್‌ಗೆ ಕಳುಹಿಸಲಾಯಿತು.

ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭೀಕರ ಗುಂಡಿನ ಕಾಳಗ ನಡೆಯುತ್ತಿದ್ದಂತೆ, ಅಡಗಿಕೊಂಡಿದ್ದ ಭಯೋತ್ಪಾದಕರು ಅಲೆಕ್ಸ್‌ಗೆ ಮೂರು ಬುಲೆಟ್‌ಗಳಿಂದ ಹೊಡೆದರು ತಕ್ಷಣವೇ ಶ್ವಾನ ಮೃತಪಟ್ಟಿದೆ.

ಕ್ರೀರಿ ಪ್ರದೇಶದ ವಾನಿಗಮ್​ ಬಾಲಾ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು.

ಹಾಗೆಯೇ ಜಮ್ಮು ಕಾಶ್ಮೀರದ ಕುಪ್ವಾರಾದಲ್ಲಿ ಲಷ್ಕರ್ ಎ ತೊಯ್ಬಾ ಸಂಘಟನೆಯ ಜತೆ ಸಂಪರ್ಕ ಹೊಂದಿದ್ದ ಇಬ್ಬರು ಉಗ್ರರನ್ನು ವಶಕ್ಕೆ ಪಡೆಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *