ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಶ್ರೀಗುಫ್ವಾರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪದಕರ ನಡುವೆ ನಡೆದ ಎನ್ಕೌಂಟರ್ನಲ್ಲಿ ಭಯೋತ್ಪದಕ ಸಂಘಟನೆಗೆ ಸೇರಿದ ಇಬ್ಬರನ್ನು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಸೇನೆಯ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ ಉಗ್ರನನ್ನು ಫಾಹೀಮ್ ಭಟ್ ಎಂದು ಗುರುತಿಸಲಾಗಿದೆ. ಅನಂತ್ನಾಗ್ ಜಿಲ್ಲೆಯ ಕಡಿಪೋರಾದ ನಿವಾಸಿಯಾಗಿದ್ದ ಈತ ಇಸ್ಲಾಮಿಕ್ ಸ್ಟೇಟ್ ಆಫ್ ಜಮ್ಮು ಮತ್ತು ಕಾಶ್ಮೀರ (ಐಎಸ್ಜೆಕೆ) ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಎಂದು ಕಾಶ್ಮೀರದ ಪೋಲಿಸ್ ಇನ್ಸ್ಪೆಕ್ಟರ್ ಜನರಲ್ ತಿಳಿಸಿದ್ದಾರೆ.
ಫಾಹೀಮ್ ಡಿಸೆಂಬರ್ 22 ರಂದು ನಡೆದಿದ್ದ ಬಜ್ಬೆಹರಾ ಪೋಲಿಸ್ ಠಾಣೆಯ ಎಎಸ್ಐ ಮೊಹಮ್ಮದ್ ಅಶ್ರಫ್ ಹತ್ಯೆಯಲ್ಲಿ ಭಟ್ ಭಾಗಿಯಾಗಿದ್ದ. ಸೇನೆಗೆ ಲಭಿಸಿದ ಖಚಿತ ಮಾಹಿತಿಯ ಅನ್ವಯ ಜಮ್ಮು ಕಾಶ್ಮೀರ ಪೋಲಿಸರು ಹಾಗೂ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಉಗ್ರರು ಹಾಗೂ ಸೇನೆಯ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಎಎಸ್ಐರನ್ನು ಹತ್ಯೆ ಮಾಡಿದ ಸಂದರ್ಭದಲ್ಲೇ ಉಗ್ರರು ಶ್ರೀನಗರದ ನಿವಾಸಿ ರೂಫ್ ಅಹ್ಮದ್ ಎಂಬ ನಾಗರಿಕನನ್ನು ಹತ್ಯೆ ಮಾಡಿದ್ದರು.