ಶ್ರೀನಗರ: ದಕ್ಷಿಣ ಕಾಶ್ಮೀರದ ಸೊಪೋರ್ ಬಳಿ ನಡೆದ ಉಗ್ರರ ದಾಳಿಯಲ್ಲಿ ಭಾರತೀಯ ಸೇನೆಯ ಇಬ್ಬರು ಹುತಾತ್ಮರಾಗಿದ್ದು, ಘಟನೆಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದು, ಪೊಲೀಸ್​ ಅಧಿಕಾರಿ ಸೇರಿ ಮೂವರು ಗಾಯಗೊಂಡಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯ ಸೊಪೋರ್​ನಲ್ಲಿ ಜಮ್ಮು ಕಾಶ್ಮೀರ ಪೊಲೀಸರು ಸೇರಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್​​ಪಿಎಫ್​) ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಸೊಪೋರ್​​​​ ಮುಖ್ಯ ಚೌಕದ ಬಳಿ ಘಟನೆ ನಡೆದಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ನಾಗರೀಕರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪೊಲೀಸ್​ ಅಧಿಕಾರಿಯನ್ನು ಇಂಡಿಯನ್ ಆರ್ಮಿಯ 92 ಬೆಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ದಾಳಿ ನಡೆದ ಪ್ರದೇಶವನ್ನು ಭದ್ರತಾ ಸಿಬ್ಬಂದಿ ಸುತ್ತುವರೆದಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

The post ಜಮ್ಮು-ಕಾಶ್ಮೀರ; ಉಗ್ರರ ದಾಳಿಯಲ್ಲಿ 2 ಇಬ್ಬರು ಯೋಧರು ಸೇರಿ ಐವರು ಸಾವು appeared first on News First Kannada.

Source: newsfirstlive.com

Source link