ಬೆಂಗಳೂರು: ರಮೇಶ್ ಜಾರಕಿಹೊಳಿ ಬ್ಲಾಕ್ ಮೇಲ್ ಕೇಸ್ ನ ಇಬ್ಬರು ಆರೋಪಿಗಳಿಗೆ ಸಿಟಿ ಸಿವಿಲ್ ಕೋರ್ಟ್ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಇಬ್ಬರು ಆರೋಪಿಗಳಾದ ನರೇಶ್ ಗೌಡ ಮತ್ತು ಶ್ರವಣ್ ಬಂಧನದಿಂದ ಬಚಾವ್ ಆಗಿದ್ದಾರೆ.

ರಮೇಶ್ ಜಾರಕಿಹೊಳಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗುವ ಮುನ್ನ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಬ್ಲ್ಯಾಕ್‍ಮೇಲ್ ಕೇಸ್ ದಾಖಲು ಮಾಡಿದ್ರು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್‍ಐಟಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡದಂತೆ ಆಕ್ಷೇಪಣೆ ಸಲ್ಲಿಸಿತ್ತು

ಆರೋಪಿಗಳು ಇದುವರೆಗೂ ವಿಚಾರಣೆಗೆ ಹಾಜರಾಗಿಲ್ಲ ಎಂದು ವಾದ ಮಾಡಿದ್ದ ಎಸ್‍ಐಟಿಗೆ ಈ ಆದೇಶದಿಂದ ಹಿನ್ನಡೆಯಾಗಿದೆ. ಅಲ್ಲದೇ ಆದೇಶ ನೀಡಿದ ನ್ಯಾಯಾಲಯ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ.

The post ಜಾರಕಿಹೊಳಿ ಕೇಸ್ ಆರೋಪಿಗಳಿಗೆ ಜಾಮೀನು appeared first on Public TV.

Source: publictv.in

Source link