ಉಡುಪಿ: ಕೊರೊನಾ ನಡುವೆ ಜೀವದ ಹಂಗು ತೊರೆದು ಕೆಲಸ ಮಾಡಿದ್ರು, ಕಳೆದ ಮೂರು ತಿಂಗಳಿನಿಂದ ಸಂಬಳ ಕೊಟ್ಟಿಲ್ಲ ಎಂದು ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಬ್ಬಂದಿ ದಿಢೀರ್ ಮುಷ್ಕರ ನಡೆಸಿದ್ದಾರೆ.

ಆಸ್ಪತ್ರೆಯ ವೈದ್ಯರು, ನರ್ಸ್, ಐಸಿಯು ಮತ್ತು ಹೌಸ್ ಕೀಪಿಂಗ್ ಸಿಬ್ಬಂದಿ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಅಂದಹಾಗೇ, ಬಿ.ಆರ್ ಶೆಟ್ಟಿ ಸಂಸ್ಥೆ ಈ ಆಸ್ಪತ್ರೆಯನ್ನು ನಡೆಸುತ್ತಿದ್ದು, ಮೂರು ತಿಂಗಳಿಂದ ಸಂಬಳ ಸಿಗದೆ ಸಿಬ್ಬಂದಿ ಸಮಸ್ಯೆ ಎದುರಿಸುತ್ತಿದ್ದಾರೆ.

ಸಿಬ್ಬಂದಿ ದಿಢೀರ್ ಮುಷ್ಕರ ನಡೆಸಿದ ಕಾರಣ ಆಸ್ಪತ್ರೆಯಲ್ಲಿದ್ದ ರೋಗಿಗಳು ಚಿಕಿತ್ಸೆ ಇಲ್ಲದೇ ಪರದಾಡುವಂತಾಗಿದೆ.

ಸುಮಾರು 200ಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಏಕಾಏಕಿ ಮುಷ್ಕರ ನಡೆದ ಕಾರಣ ದೂರದ ಊರುಗಳಿಂದ ಚಿಕಿತ್ಸೆಗೆ ಆಗಮಿಸಿದ್ದ ಜನರು ಸಮಸ್ಯೆ ಎದುರಿಸಿದ್ದಾರೆ. ಇಂದು ಬೆಳಗ್ಗಿನಿಂದ ಯಾವುದೇ ಚಿಕಿತ್ಸೆ ಇಲ್ಲದೆ ವೈದ್ಯರಿಗಾಗಿ ಗರ್ಭಿಣಿಯರು ಕಾಯುತ್ತಿದ್ದ ದೃಶ್ಯಗಳು ಕಂಡುಬಂದಿದೆ.

The post ಜೀವದ ಹಂಗು ತೊರೆದು ಕೆಲಸ ಮಾಡಿದ್ರು 3 ತಿಂಗಳಿಂದ ಸಂಬಳವಿಲ್ಲ-ಉಡುಪಿ ಆಸ್ಪತ್ರೆ ಸಿಬ್ಬಂದಿ ಮುಷ್ಕರ appeared first on News First Kannada.

Source: newsfirstlive.com

Source link