ಮೈಸೂರು: ಜೀವನದಲ್ಲಿ ಜಿಗುಪ್ಸೆಯಾಗಿ ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

 ಪಲ್ಲವಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಮೈಸೂರಿನ ವಿನಾಯಕ ನಗರದಲ್ಲಿ ನಡೆದಿದೆ. ದಂಪತಿಗಳ ನಡುವೆ ಆಗುತ್ತಿರುವ ಜಗಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಇದನ್ನೂ ಓದಿ: ಆಷಾಢ ಮಾಸ – 1000 ಕೆ.ಜಿ ಮೀನು, 10 ಕುರಿ ಮಗಳಿಗೆ ಗಿಫ್ಟ್ ಕೊಟ್ಟ ತಂದೆ

ಒಂದು ವರ್ಷದ ಹಿಂದೆ ಮದುವೆಯಾಗಿದ್ದ ಪಲ್ಲವಿ ಮೂಲತಃ ಹುಣಸೂರು ತಾಲೂಕು ಹಳ್ಳದಕೊಪ್ಪಲು ಗ್ರಾಮದ ನಿವಾಸಿಯಾಗಿದ್ದಾರೆ. ಗಂಡ ಹೆಂಡತಿ ನಡುವೆ ಚಿಕ್ಕ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಇದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ನೀವು ಇಲ್ಲದೇ ನನ್ನ ಬದುಕಿನಲ್ಲಿ ಖಾಲಿತನ ಉಂಟಾಗಿದೆ: ಸೋನು ಸೂದ್

The post ಜೀವನದಲ್ಲಿ ಜಿಗುಪ್ಸೆ – ಗೃಹಿಣಿ ಆತ್ಮಹತ್ಯೆ appeared first on Public TV.

Source: publictv.in

Source link