ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ತಮ್ಮ ರಾಜೀನಾಮೆಯ ಸುಳಿವು ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಎಗ ಮಾತನಾಡಿದ ಅವರು, ಜುಲೈ 25ರ ನಂತರ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ. ನನ್ನ ಪರ ಪ್ರತಿಭಟನೆ ನಡೆಸುವುದು ಸರಿಯಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ ಎಮದು ಹೇಳುವ ಮೂಲಕ ರಾಜೀನಾಮೆ ನೀಡುವುದರ ಕುರಿತು ಸುಳಿವು ನೀಡಿದ್ದಾರೆ.

ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ. ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು. ಹೈಕಮಾಂಡ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಜುಲೈ 25ರ ಹೈಕಮಾಂಡ್ ಸಂದೇಶಕ್ಕೆ ಕಾಯುತ್ತಿದ್ದೇನೆ ಎಂದರು.

The post ಜುಲೈ 25ರ ಬಳಿಕ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇನೆ: ಬಿಎಸ್‍ವೈ appeared first on Public TV.

Source: publictv.in

Source link