ಬೆಂಗಳೂರು: 2020-21ನೇ ಸಾಲಿನ ಎಸ್​​ಎಸ್​​ಎಲ್​ಸಿ ಪರೀಕ್ಷೆ ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಯಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಗೆ ಆದ್ಯತೆಯ ಮೇಲೆ ಲಸಿಕೆ ನೀಡಲು ಅಗತ್ಯ ಕ್ರಮಗಳನ್ನು ವಹಿಸಬೇಕೆಂದು ಪತ್ರದ ಮೂಲಕ ಜಿಲ್ಲಾಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ನಿರ್ದೇಶನ ನೀಡಿದ್ದಾರೆ.

ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯ ಪಟ್ಟಿ ಮಾಡಿ, ಆಯಾ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ನೀಡಲಿದ್ದಾರೆ. ಅವರೆಲ್ಲರಿಗೂ ಪರೀಕ್ಷೆ ಆರಂಭಕ್ಕೂ ಮುನ್ನವೇ ಲಸಿಕೆ ದೊರೆಯುವಂತೆ ಕ್ರಮ ವಹಿಸಬೇಕು. ಈ ಬಾರಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಹಿನ್ನೆಲೆಯಲ್ಲಿ 6,000ಕ್ಕೂ ಹೆಚ್ಚಿನ ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗುತ್ತದೆ. ಹೆಚ್ಚಿನ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಅವರಿಗೆಲ್ಲ ಆದ್ಯತೆ ಮೇಲೆ ಲಸಿಕೆ ನೀಡಬೇಕಾದ ಅಗತ್ಯವಿದೆ ಎಂದು ಸುರೇಶ್​ ಕುಮಾರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಎಸ್​​ಎಸ್​​ಎಲ್​​ಸಿ ಪರೀಕ್ಷೆ ಹೆಚ್ಚಿನ ಸುರಕ್ಷತಾ ವಾತಾವರಣದಲ್ಲಿ ನಡೆಯುವ ಹಿನ್ನೆಲೆ ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಎಲ್ಲರೂ ಲಸಿಕೆ ಅಗತ್ಯವಿದ್ದು, ಕೋವಿಡ್ ಕರ್ತವ್ಯದಿಂದ ಶಿಕ್ಷಕರ ಬಿಡುಗಡೆಗೆ ಇದೇ ವೇಳೆ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಈಗಾಗಲೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರು ನಗರದ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸುರೇಶ್​​ ಕುಮಾರ್ ಸುರೇಶ್ ಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.
ಈಗಾಗಲೇ ಶೈಕ್ಷಣಿಕ ಚುಟುವಟಿಕೆಗಳು ಪ್ರಾರಂಭಗೊಂಡಿದ್ದು, ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಹ ನಡೆಯುತ್ತಿರುವುದರಿಂದ ಶಿಕ್ಷಕರು ಶಾಲಾ ಕರ್ತವ್ಯದಲ್ಲಿ ಭಾಗಿಯಾಗಬೇಕಿದೆ. ಎಸ್​​ಎಸ್​​ಎಲ್​​​ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ, ಪರೀಕ್ಷಾ ಪೂರ್ವ ಕೆಲಸಗಳಲ್ಲಿ ತೊಡಗಿಕೊಳ್ಳುವ ಶಿಕ್ಷಕರು ಕೋವಿಡ್ ಲಸಿಕೆ ಪಡೆಯುವ ಕಾರಣ ತಕ್ಷಣವೇ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಸುರೇಶ್​ ಕುಮಾರ್ ಮನವಿ ಮಾಡಿದ್ದಾರೆ.

The post ಜುಲೈ 3ನೇ ವಾರದಲ್ಲಿ SSLC ಪರೀಕ್ಷೆ- ಜಿಲ್ಲಾಧಿಕಾರಿಗಳಿಗೆ ಸುರೇಶ್​ ಕುಮಾರ್​ ಪತ್ರ appeared first on News First Kannada.

Source: newsfirstlive.com

Source link