ಹಾಸನ: ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗದ ಹಿನ್ನೆಲೆಯಲ್ಲಿ ಮತ್ತೊಂದು ವಾರ ಲಾಕ್‍ಡೌನ್ ಮುಂದುವಡಿiಸುತ್ತೇವೆಂದು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.

ಹಾಸನದಲ್ಲಿ ಸಿಎಂ ವಿಸಿ ಬಳಿಕ ಮಾತನಾಡಿದ ಅವರು, ಪ್ರತಿವಾರ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ, ಮುಂದಿನ ವಾರದೊಳಗೆ ಬಹಳಷ್ಟು ಕಡಿಮೆಯಾಗಲಿದೆ. 23 ಹಳ್ಳಿಗಳಲ್ಲಿ ಪಾಸಿಟಿವ್ ಗಳ ಸಂಖ್ಯೆ ಹೆಚ್ಚಾಗಿದೆ. ವೈದ್ಯರ ನಡೆ ಹಳ್ಳಿಯ ಕಡೆ ಎರಡನೇ ಸುತ್ತು ಆರಂಭ ಮಾಡಿದ್ದೇವೆ. ಸೋಂಕಿತರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ನಲ್ಲಿಯೇ ಚಿಕಿತ್ಸೆ ಪಡೆಯಬೇಕೆಂದರು.

ನಾಳೆ ಸಿಎಂ ಯಡಿಯೂರಪ್ಪ ಹಾಸನ ಜಿಲ್ಲೆಗೆ ಆಗಮಿಸಲಿದ್ದು, ಜಿಲ್ಲೆಯ ಸ್ಥಿತಿಗತಿಯ ಬಗ್ಗೆ ವಿವರಿಸುತ್ತೇವೆ. ಈಗ ಇರುವ ಲಾಕ್ ಡೌನ್ ನನ್ನು ಜೂ. 14 ರ ಬಳಿಕವೂ ಒಂದು ವಾರ ವಿಸ್ತರಣೆ ಮಾಡುತ್ತೇವೆ ಎಂದು ತಿಳಿಸಿದ್ರು. ಇದನ್ನೂ ಓದಿ: 8 ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ – ಏನು ಚರ್ಚೆ ನಡೆಯಿತು?

ಹಾಸನದಲ್ಲಿ ಈ ಹಿಂದೆ ವಾರದಲ್ಲಿ ಮೂರು ದಿನ, ಅಂದರೆ ಸೋಮವಾರ, ಬುಧವಾರ, ಶುಕ್ರವಾರ ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯವಸ್ತು ಖರೀದಿಸಲು ಅವಕಾಶ ನೀಡಲಾಗಿದ್ದು, ಉಳಿದ ನಾಲ್ಕುದಿನ ಸಂಪೂರ್ಣ ಲಾಕ್‍ಡೌನ್ ಘೋಷಿಸಲಾಗಿತ್ತು.

The post ಜೂನ್ 14ರ ನಂತ್ರವೂ ಒಂದು ವಾರ ಹಾಸನದಲ್ಲಿ ಲಾಕ್‍ಡೌನ್ ಮುಂದುವರಿಕೆ: ಗೋಪಾಲಯ್ಯ appeared first on Public TV.

Source: publictv.in

Source link