
ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು
ಯೋಗ ದಿನಾಚರಣೆಯಲ್ಲಿ ಪ್ರಧಾನಿ ಭಾಗವಹಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿಯಾಗಿ ಆಹ್ವಾನಿಸಿದ್ದರು.
ಮೈಸೂರು: ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಹಿನ್ನೆಲೆ ಈ ಬಾರಿ ದೇಶದ ಪ್ರಧಾನಿ ನರೇಂದ್ರ ಮೋದಿ (Narendra Modi) ಮೈಸೂರಿಗೆ ಆಗಮಿಸುತ್ತಿದ್ದಾರೆ. ಕಾರ್ಯಕ್ರಮದ ಬಗ್ಗೆ ಪ್ರಧಾನಿ ಕಾರ್ಯಾಲಯ ದೃಢಪಡಿಸಿದ್ದು, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ಗೆ ಪತ್ರ ಬರೆದಿದೆ. ಪಿ.ರವಿಕುಮಾರ್ಗೆ ಬರೆದ ಪತ್ರದಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಪಿಎಂಒ ತಿಳಿಸಿದೆ. ಯೋಗ ದಿನಾಚರಣೆಯಲ್ಲಿ ಪ್ರಧಾನಿ ಭಾಗವಹಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿಯಾಗಿ ಆಹ್ವಾನಿಸಿದ್ದರು.