ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಜೂನ್ 24ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನ ಮಾನ ರದ್ದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಹತ್ವದ ಚರ್ಚೆ ನಡೆಸುವ ಉದ್ದೇಶದಿಂದ ಮೋದಿ ಈ ಸಭೆ ಕರೆದಿದ್ದಾರೆ.

ಸಭೆಯಲ್ಲಿ ವಿವಿಧ ಪಕ್ಷಗಳ 14 ಮುಖಂಡರಿಗೆ ಆಹ್ವಾನ ನೀಡಲಾಗಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡ್ತಿದ್ದ ಆರ್ಟಿಕಲ್ 370ಯನ್ನ 2019ರ ಆಗಸ್ಟ್​ನಲ್ಲಿ ರದ್ಧುಗೊಳಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ನಡೆಸುತ್ತಿರುವ ಮೊದಲ ಸಭೆ ಇದ್ದಾಗಿದ್ದು, ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

The post ಜೂನ್ 24ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಿ ಮೋದಿ appeared first on News First Kannada.

Source: newsfirstlive.com

Source link