ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಕುಮಾರಸ್ವಾಮಿ
ಮೈಸೂರು: ಮೇ 16ರಂದು ಜೆಡಿಎಸ್ನ ಜನತಾ ಜಲಧಾರೆ ಕಾರ್ಯಕ್ರಮ ಹಿನ್ನೆಲೆ ಇಂದು (ಏಪ್ರಿಲ್ 12) ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಚಾಮುಂಡಿ ಬಟ್ಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ ಅವರು, ಜೆಡಿಎಸ್ಗೆ (JDS) ಬಹುಮತ ಕೊಡಿ. 5 ವರ್ಷದಲ್ಲಿ ರಾಜ್ಯದ ನೀರಾವರಿ ಯೋಜನೆ ಅನುಷ್ಠಾನ ಮಾಡುತ್ತೇನೆ. ಸಾಧ್ಯವಾಗದಿದ್ದರೆ ಜೆಡಿಎಸ್ ವಿಸರ್ಜಿಸುತ್ತೇನೆ ಅಂತ ಚಾಮುಂಡೇಶ್ವರದಲ್ಲಿ ಪ್ರಮಾಣ ಮಾಡಿದ್ದಾರೆ. ಈ ಬಾರಿ ಕನ್ನಡಿಗರ ಬಹುಮತದ ಸರ್ಕಾರ ಬೇಕು. ಯಾವ ಪಕ್ಷದ ಜೊತೆಯೂ ಹೊಂದಾಣಿಕೆ ಇಲ್ಲ. 30 ಅಥವಾ 40 ಸ್ಥಾನಕ್ಕಾಗಿ ಹೋರಾಟ ಅಲ್ಲ. ಪೂರ್ಣ ಪ್ರಮಾಣದ ಸರ್ಕಾರಕ್ಕೆ ಹೋರಾಟ. ನಮ್ಮದು ವಿಚಾರಾಧಾರಿತವಾದ ಹೋರಾಟ. ಧರ್ಮ ಧರ್ಮಗಳ ನಡುವೆ ಬೆಂಕಿ ಇಟ್ಟು ಮತ ಕೇಳುತ್ತಿಲ್ಲ. ರಾಜ್ಯದ ಅಭಿವೃದ್ದಿಗಾಗಿ ನಮ್ಮ ಹೋರಾಟ ಎಂದರು.
ಅಧಿಕೃತ ಚುನಾವಣಾ ಪ್ರಚಾರ:
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಪರ್ಯಾಯವಲ್ಲ. ಅದು ಶೋಗಾಗಿ ನಡೆಸಿದ ಯಾತ್ರೆ. ಅವರು ನೇರವಾಗಿ ರಾಜಕೀಯ ಯಾತ್ರೆ ಅಂತಾ ಹೇಳಲಿಲ್ಲ. ನಮ್ಮದು ಜನರ ಮುಂದೆ ಸಮಸ್ಯೆ ಬಿಚ್ಚಿಡಲು ಯಾತ್ರೆ. ಈ ಮೂಲಕ ಮುಂದಿನ ಚುನಾವಣೆಗಾಗಿ ಯಾತ್ರೆ ಮಾಡಲಾಗುತ್ತದೆ. ಯಾತ್ರೆ ಮೂಲಕ ಅಧಿಕೃತ ಚುನಾವಣಾ ಪ್ರಚಾರ ಆರಂಭಿಸಿದ್ದೇನೆ. ಇದನ್ನು ನಾನು ನೇರವಾಗಿ ಹೇಳುತ್ತಿದ್ದಾನೆ ಅಂತ ಮೈಸೂರಿನಲ್ಲಿ ಹೆಚ್ಡಿಕೆ ತಿಳಿಸಿದ್ದಾರೆ.
ಇನ್ನು ಇದೇ ವೇಳೆ ಸಿಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ನಿಮ್ಮ ಮಾತಿನ ಅರ್ಥ ಏನು? ರಾಜ್ಯದಲ್ಲಿ ತಲೆ ಒಡೆಯುತ್ತಾ ಇರುತ್ತೇವೆ ಅಂತಾನಾ? ನೀವು ತಲೆ ಒಡೆಯುತ್ತಿರಿ, ನಾವು ಸಾಂತ್ವನ ಹೇಳಬೇಕಾ ಅನ್ನೋದಾ? ಎಂದು ಪ್ರಶ್ನೆ ಮಾಡಿದರು.