ಜೆಡಿಎಸ್​​ ಪಕ್ಷವನ್ನು ಟೀಕಿಸದಿದ್ದರೆ ಸಿದ್ದರಾಮಯ್ಯಗೆ ನಿದ್ದೇನೇ ಬರಲ್ಲ; HDK ಆಕ್ರೋಶ

ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರಲ್ಲ ಅಂತ ಕಾಣತ್ತೆ. ಸಿಂದಗಿ ಕ್ಷೇತ್ರದಲ್ಲಿ ಅವರ ಪಕ್ಷ 3ನೇ ಸ್ಥಾನದಲ್ಲಿತ್ತು. ಇಲ್ಲಿ ಕಾಂಗ್ರೆಸ್ 2ನೇ ಸ್ಥಾನಕ್ಕೆ ಬಂದ ಇತಿಹಾಸವೇ ಇಲ್ಲ. ಈಗ ನೋಡಿದರೇ ರಾಜಕೀಯ ಬದುಕು ಕೊಟ್ಟ ಪಕ್ಷವನ್ನೆ ನಿಂದಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈಗ ಎಂಸಿ ಮನಗೂಳಿ ನಿಧನದ ಅನುಕಂಪದಲ್ಲಿ ತೇಲುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಇದ್ದ ಅವರ ಪುತ್ರನನ್ನು ಹೈಜಾಕ್ ಮಾಡಿ, ಜನರಿಗೆ ತಮ್ಮ ಸಿದ್ದಕಲೆ ದರ್ಶನ ಆಗುತ್ತಿದ್ದಂತೆಯೇ ಈಗ ಅನುಕಂಪ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಎಚ್​ಡಿಕೆ ಸಿಡಿಮಿಡಿಗೊಂಡಿದ್ದಾರೆ.

ಬುದ್ಧಿವಂತ ಮತದಾರರು ಜೆಡಿಎಸ್ ಪಕ್ಷಕ್ಕೆ ಮತ ಹಾಕಲ್ಲ ಎಂದು ಸಿದ್ಧಹಸ್ತರು ಫರ್ಮಾನು ಹೊರಡಿಸಿದ್ದಾರೆ. ಜನರು ಇವರ ಜೇಬಿನಲ್ಲಿ ಇದ್ದಾರಾ? ಇದು ಸಿಂದಗಿ ಜನರಿಗೆ ಅಪಮಾನ ಮಾಡುವ ಅಹಂಕಾರದ ಹೇಳಿಕೆ. ಅವರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಜನರ ಮೇಲೆ ಅನುಕಂಪ ಇದ್ದರೆ ರಾಹುಲ್​​ ಕಾಶ್ಮೀರಕ್ಕೆ ಹೋಗಲಿ’- ಕೇಂದ್ರ ಸಚಿವ ಹೀಗಂದಿದ್ಯಾಕೆ?

The post ಜೆಡಿಎಸ್​​ ಪಕ್ಷವನ್ನು ಟೀಕಿಸದಿದ್ದರೆ ಸಿದ್ದರಾಮಯ್ಯಗೆ ನಿದ್ದೇನೇ ಬರಲ್ಲ; HDK ಆಕ್ರೋಶ appeared first on News First Kannada.

News First Live Kannada

Leave a comment

Your email address will not be published. Required fields are marked *