ಜೆಡಿಎಸ್ 125 ಸ್ಥಾನ ಗೆಲ್ಲಲ್ಲ, ಮುಖ್ಯಮಂತ್ರಿ ಸ್ಥಾನ ನಮಗಿಲ್ಲ ಬಿಡಿ -ಶಾಸಕ ಎಸ್.ಆರ್. ಶ್ರೀನಿವಾಸ್

ಜೆಡಿಎಸ್ 125 ಸ್ಥಾನ ಗೆಲ್ಲಲ್ಲ, ಮುಖ್ಯಮಂತ್ರಿ ಸ್ಥಾನ ನಮಗಿಲ್ಲ ಬಿಡಿ -ಶಾಸಕ ಎಸ್.ಆರ್. ಶ್ರೀನಿವಾಸ್

ತುಮಕೂರು: ಮುಂಬರುವ 2024ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಜೆಡಿಎಸ್ ಪಕ್ಷವು 120 ಸ್ಥಾನಗಳನ್ನು ಗೆಲ್ಲುವುದಿಲ್ಲ, ನಮ್ಮ ಪಕ್ಷದ ನಾಯಕರು ಮುಖ್ಯಮಂತ್ರಿಯೂ ಆಗುವುದಿಲ್ಲ ಎಂದು ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಸ್ವಪಕ್ಷದ ವಿರುದ್ಧವೇ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಗುಬ್ಬಿ ತಾಲೂಕಿನ ಎಂ.ಎಚ್ ಪಟ್ಟಣ ಗ್ರಾಮ ಪಂಚಾಯಿತಿ ಆವರಣದಲ್ಲಿ ಕೃಷಿ ಇಲಾಖೆಯ ಮಾಹಿತಿ ರಥಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ  ಎಸ್.ಆರ್ ಶ್ರೀನಿವಾಸ್​ ಮಾತನಾಡಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕಾಂಗ್ರೆಸ್ ಪಕ್ಷವು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 120 ಸ್ಥಾನಗಳನ್ನು ಗೆದ್ದಾಗ ಮಾತ್ರ ಸಿಎಂ ಕುರ್ಚಿ ಬಗ್ಗೆ ಚಿಂತನೆ ಮಾಡಬೇಕು. ಅದನ್ನು ಬಿಟ್ಟು ಪ್ರಚಾರಕ್ಕೆ ಮಾತನಾಡುವುದು ಸರಿಯಲ್ಲ. ಇನ್ನು ನಮ್ಮ ಜೆಡಿಎಸ್ ಪಕ್ಷದಲ್ಲಿ ಇನ್ನೇನು ಮಾತನಾಡುವ ಹಾಗಿಲ್ಲ. ನಾವು ಮುಖ್ಯಮಂತ್ರಿ ಆಗೋದಿಲ್ಲ. ಜೆಡಿಎಸ್ 125 ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಸ್ವಪಕ್ಷದ ಬಗ್ಗೆಯೇ ಮಾತನಾಡಿದರು.
ಕಾಂಗ್ರೆಸ್ ಪಕ್ಷದವರು ಸಿಎಂ ಕುರ್ಚಿ ಬಗ್ಗೆ ಯಾಕೆ ಮಾತನಾಡುತ್ತಾರೋ ತಿಳಿಯುತ್ತಿಲ್ಲ. ಯಾರಾದರೂ ತಲೆ ಕೆಟ್ಟವರು ಮಾತ್ರ ಮಾತನಾಡಬೇಕು ಅಷ್ಟೇ. 120 ವಿಧಾನಸಭಾ ಕ್ಷೇತ್ರಗಳನ್ನು ಗೆದ್ದಾಗ ಮಾತ್ರ ಈ ಬಗ್ಗೆ ಚಿಂತನೆ ಮಾಡಬೇಕು, ಕೇವಲ ಪ್ರಚಾರಕ್ಕೆ ಮಾತನಾಡುವುದು ಸರಿಯಲ್ಲ ಎಂದಿದ್ದಾರೆ.

ಪ್ರಧಾನಿ ಮೋದಿ ದರೋಡೆಕೋರರು ಇದ್ದಂತೆ..
ಪೆಟ್ರೋಲ್​ ಮತ್ತು ಡಿಸೇಲ್ ಬೆಲೆ ಏರಿಕೆ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕುರಿತು ಕಿಡಿಕಾರಿದ ಶ್ರೀನಿವಾಸ್​ ಅವರು, ಪ್ರಧಾನಿ ಮೋದಿ ದರೋಡೆಕೋರರು ಇದ್ದಂತೆ. ಜನರ ಜೇಬಿಗೆ ಕೈ ಹಾಕಿ ಹಣ ಕದಿಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಸ್ತುತ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳ ಬೆಲೆ ಏರಿಕೆ ಕೃಷಿ ಕ್ಷೇತ್ರದ ಮೇಲೆ ಮಾತ್ರವಲ್ಲದೆ ದೇಶದ ಪ್ರತಿಯೊಂದು ಆರ್ಥಿಕ ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿದೆ ಹಾಗೂ ಸಾರ್ವಜನಿಕವಾಗಿ ತೊಂದರೆಯಾಗಿದೆ. ಕೈಗಾರಿಕೆಗಳಿಗೂ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಬೇಕು ಕೇಂದ್ರ 33 ರೂಪಾಯಿ, ರಾಜ್ಯ ಸರ್ಕಾರ 28 ರೂಪಾಯಿ ತೆರಿಗೆ ಹಾಕುತ್ತಿವೆ. ಹಾಗಾಗಿ ಕೇಂದ್ರ ಸರ್ಕಾರ 20 ರೂಪಾಯಿ ರಾಜ್ಯ ಸರ್ಕಾರ ಹತ್ತು ರೂಪಾಯಿ ತೆರಿಗೆ ಕಡಿಮೆ ಮಾಡಿದರೆ ಜನರಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಮಾಧ್ಯಮಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ನಿದ್ದೆ ಮಾಡುತ್ತಿರುವುದು ಅಸಹನೀಯವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರನ್ನು ದರೋಡೆ ಮಾಡುತ್ತಿದೆ. ಇದನ್ನುಸಾರ್ವಜನಿಕರು ಅರ್ಥಮಾಡಿಕೊಳ್ಳಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

The post ಜೆಡಿಎಸ್ 125 ಸ್ಥಾನ ಗೆಲ್ಲಲ್ಲ, ಮುಖ್ಯಮಂತ್ರಿ ಸ್ಥಾನ ನಮಗಿಲ್ಲ ಬಿಡಿ -ಶಾಸಕ ಎಸ್.ಆರ್. ಶ್ರೀನಿವಾಸ್ appeared first on News First Kannada.

Source: newsfirstlive.com

Source link