ಜ್ಞಾನ ದೀವಿಗೆ – ಹೊಸಪೇಟೆ ತಾಲೂಕಿನ 113 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ಬಳ್ಳಾರಿ: ಪಬ್ಲಿಕ್ ಟಿವಿ ಜ್ಞಾನದೀವಿಗೆ ಕಾರ್ಯ ಮುಂದುವರೆದಿದ್ದು, ನೂತನ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾಕಬಾಳು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಒಟ್ಟು 113 ಮಕ್ಕಳಿಗೆ ಇಂದು ಉಚಿತವಾಗಿ ಟ್ಯಾಬ್ ವಿತರಣೆ ಮಾಡಲಾಯಿತು.

ಅದೇ ರೀತಿಯ ಹೊಸಪೇಟೆ ತಾಲೂಕಿನ ಬೈಲುವದ್ದಗೇರಿ ಸರ್ಕಾರಿ ಪ್ರೌಢ ಶಾಲೆಯ 35 ಜನ ಹತ್ತನೇ ತರಗತಿ ಮಕ್ಕಳಿಗೆ ಒಟ್ಟು 17 ಟ್ಯಾಬ್ ಗಳನ್ನು ವಿತರಣೆ ಮಾಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ಸಹಕಾರದಿಂದ ಈ ಟ್ಯಾಬ್ ಗಳನ್ನು ವಿತರಣೆ ಮಾಡಲಾಗಿದ್ದು, ಸಚಿವರ ಸಂಬಂಧಿ ಸಂದೀಪ್ ಸಿಂಗ್ ಅವರು, ಇಂದು ಮಕ್ಕಳಿಗೆ ಟ್ಯಾಬ್ ಗಳನ್ನು ವಿತರಣೆ ಮಾಡಿದರು.

ಕಾಕಬಾಳು ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ಯಾಬ್ ವಿತರಣೆ ಮಾಡಿ ಮಾತನಾಡಿದ ಅವರು, ಕೊರೊನಾ ಸಂಕಷ್ಟದ ಸಮಯದಲ್ಲಿ ಬಡವರಿಗೆ ಸಹಾಯ ಮಾಡಲು ಅವಕಾಶ ಸಿಕ್ಕಿದ್ದು ಒಳ್ಳೆಯದು, ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ್ದು, ಅವರ ಉಜ್ವಲ ಭವಿಷ್ಯವನ್ನು ನಿರ್ಮಾಣ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಅಲ್ಲದೇ ಕೊರೊನಾ ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಅವಕಾಶ ಸಿಕ್ಕಿರುವುದು ನಮ್ಮ ಪುಣ್ಯ ಎಂದಿದ್ದಾರೆ. ಇದನ್ನೂ ಓದಿ: ಮಂಗಳೂರು ವಕೀಲರ ಸಂಘದಿಂದ 500ಕ್ಕೂ ಹೆಚ್ಚು ಮಂದಿಗೆ ವ್ಯಾಕ್ಸಿನ್

The post ಜ್ಞಾನ ದೀವಿಗೆ – ಹೊಸಪೇಟೆ ತಾಲೂಕಿನ 113 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ appeared first on Public TV.

Source: publictv.in

Source link