
ಜ್ಯೂ.ಎನ್ಟಿಆರ್
‘ಆರ್ಆರ್ಆರ್’ ಸಿನಿಮಾದಲ್ಲಿ ಆಲಿಯಾ ಭಟ್ ನಟಿಸಿದ್ದಾರೆ. ಈ ಚಿತ್ರದ ಮೂಲಕ ಅವರು ಟಾಲಿವುಡ್ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ಅವರು ಜ್ಯೂ.ಎನ್ಟಿಆರ್ ಚಿತ್ರಕ್ಕೆ ನಾಯಕಿ ಆಗಲಿದ್ದಾರೆ ಎನ್ನಲಾಗಿತ್ತು.
ಜ್ಯೂ.ಎನ್ಟಿಆರ್ ( Jr. NTR) ಹಾಗೂ ಕೊರಟಾಲ ಶಿವ (Koratala Siva) ಹೊಸ ಚಿತ್ರಕ್ಕಾಗಿ ಒಂದಾಗುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಈಗಾಗಲೇ ದೊಡ್ಡ ಮಟ್ಟದ ನಿರೀಕ್ಷೆ ಮೂಡಿದೆ. ಜ್ಯೂ.ಎನ್ಟಿಆರ್ ‘ಆರ್ಆರ್ಆರ್’ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದರೆ, ಕೊರಟಾಲ ಶಿವ ‘ಆಚಾರ್ಯ’ ಸಿನಿಮಾದ ಸೋಲಿನಿಂದ ಕಂಗೆಟ್ಟಿದ್ದಾರೆ. ಶುಕ್ರವಾರ (ಮೇ 20) ಜ್ಯೂ.ಎನ್ಟಿಆರ್ ಜನ್ಮದಿನ ( Jr. NTR Birthday). ಈ ಸಿನಿಮಾ ಕುರಿತು ಅಪ್ಡೇಟ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಅಷ್ಟೇ ಅಲ್ಲ, ಈ ಚಿತ್ರದ ನಾಯಕಿ ಯಾರು ಎಂಬ ಬಗ್ಗೆಯೂ ಘೋಷಣೆ ಆಗಲಿದೆ ಎನ್ನಲಾಗುತ್ತಿದೆ.
‘ಆರ್ಆರ್ಆರ್’ ಸಿನಿಮಾದಲ್ಲಿ ಆಲಿಯಾ ಭಟ್ ನಟಿಸಿದ್ದಾರೆ. ಈ ಚಿತ್ರದ ಮೂಲಕ ಅವರು ಟಾಲಿವುಡ್ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ಅವರು ಜ್ಯೂ.ಎನ್ಟಿಆರ್ ಚಿತ್ರಕ್ಕೆ ನಾಯಕಿ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಅವರು ಚಿತ್ರತಂಡದಿಂದ ಹೊರ ನಡೆದಿದ್ದಾರೆ ಎಂದು ವರದಿ ಆಗಿದೆ. ಇದಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ.
ಇದಾದ ಬಳಿಕ ಶ್ರದ್ಧಾ ಕಪೂರ್ ಅವರು ಚಿತ್ರತಂಡ ಸೇರಿಕೊಳ್ಳಲಿದ್ದಾರೆ ಎಂದು ವರದಿ ಮಾಡಲಾಗಿತ್ತು. ಆದರೆ, ಅದು ಕೂಡ ಸುಳ್ಳಾಗಿದೆ. ಅವರ ಜತೆ ಈ ಬಗ್ಗೆ ಮಾತುಕತೆ ಆಗಿಲ್ಲ ಎನ್ನುತ್ತಿವೆ ಮೂಲಗಳು. ‘ಸಾಹೋ’ ಸಿನಿಮಾ ಮೂಲಕ ಶ್ರದ್ಧಾ ಕಪೂರ್ ತೆಲುಗು ಇಂಡಸ್ಟ್ರಿಗೆ ಕಾಲಿಟ್ಟರು. ಈ ಚಿತ್ರ ಸೋತಿತು. ಆ ಬಳಿಕ ಅವರು ಬಾಲಿವುಡ್ನಲ್ಲೇ ಬ್ಯುಸಿ ಆಗಿದ್ದಾರೆ. ಈಗ ತಂಡ ಸೇರಿಕೊಳ್ಳುತ್ತಿರುವ ನಾಯಕಿ ಯಾರು ಎನ್ನುವ ಪ್ರಶ್ನೆ ಎದುರಾಗಿದೆ.