ಟಾಂಗಾ-ಎಲೆಕ್ಟ್ರಿಕ್ ಗಾಡಿ ಓಡಿಸಿ, ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಮುಖಂಡರ ಪ್ರತಿಭಟನೆ

ಟಾಂಗಾ-ಎಲೆಕ್ಟ್ರಿಕ್ ಗಾಡಿ ಓಡಿಸಿ, ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಮುಖಂಡರ ಪ್ರತಿಭಟನೆ

ಬೆಂಗಳೂರು: ಇಂಧನ ಬೆಲೆ ಏರಿಕೆ ಖಂಡಿಸಿ ಇಂದು ನಗರದಲ್ಲಿ ಕಾಂಗ್ರೆಸ್​ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೆಪಿಸಿಸಿ ಕೇಂದ್ರ ಕಚೇರಿಯಿಂದ ಆರಂಭಿಸಿ ಬಿಬಿಎಂಪಿ ಕೇಂದ್ರ ಕಚೇರಿಯವರೆಗೆ ಜಾಥ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ಹಲವು ಮುಖಂಡರು ಟಾಂಗಾ ಗಾಡಿ ಹಾಗೂ ಬ್ಯಾಟರಿ ಚಾಲಿತ ವಾಹನ ಓಡಿಸುವ ಮೂಲಕ ಪ್ರತಿಭಟನೆ ಆರಂಭಿಸಿದ್ದಾರೆ.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಸೈಕಲ್ ಜಾಥಾ ನಡೆಸುತ್ತಿದೆ. ಬೆಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಜಾಥಾ ನಡೆಯುತ್ತಿದೆ.

 

The post ಟಾಂಗಾ-ಎಲೆಕ್ಟ್ರಿಕ್ ಗಾಡಿ ಓಡಿಸಿ, ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಮುಖಂಡರ ಪ್ರತಿಭಟನೆ appeared first on News First Kannada.

Source: newsfirstlive.com

Source link