ಬೆಂಗಳೂರು: ಇಂದು ಸ್ಯಾಂಡಲ್ವುಡ್ನಿಂದ ‘ಪುನೀತ ನಮನ’ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಹೈದರಾಬಾದ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಸಿನಿ ದಿಗ್ಗಜರು ಆಗಮಿಸುತ್ತಿದ್ದಾರೆ.
ಮುಂಜಾಗೃತ ಕ್ರಮವಾಗಿ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಏರ್ಪೋರ್ಟ್ಗೆ ಗಣ್ಯರು ಆಗಮಿಸಲಿದ್ದಾರೆ. ನಟ, ನಟಿಯರು ಆಗಮನ ಹಿನ್ನೆಲೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಬರುವ ನಟ ನಟಿಯರ ಜೊತೆ ಅಭಿಮಾನಿಗಳು ಸೆಲ್ಫಿಗೆ ಮುಗಿಬೀಳುವ ಸಾಧ್ಯತೆ ಇದೆ. ಅಲ್ಲದೇ ಇತ್ತೀಚೆಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಜಯ್ ಸೇತುಪತಿ ಆಗಮಿಸಿದ್ದ ವೇಳೆ ಅವರ ಮೇಲೆ ಹಲ್ಲೆ ನಡೆದಿತ್ತು. ಹೀಗಾಗಿ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಭದ್ರತೆ ನೀಡಲು ಮುಂದಾಗಿದೆ.
ಇದನ್ನೂ ಓದಿ: ಪುನೀತ್ ನಿವಾಸಕ್ಕೆ ಆಗಮಿಸುತ್ತಿದ್ದ ನಟ ವಿಜಯ್ ಸೇತುಪತಿ ಮೇಲೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹಲ್ಲೆ