ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಹಿಂಸಾಚಾರ ನಡೆದಿರುವ ಬಗ್ಗೆ ವರದಿಯಾಗಿದೆ. ಪಶ್ಚಿಮ ಬಂಗಾಳದ ಅರಂಬಾಘ್​ನ ಬಿಜೆಪಿ ಕಚೇರಿಗಳು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈ ದುಷ್ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.

ಹಿಂಸಾಚಾರದ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಬಿ.ಎಲ್. ಸಂತೋಷ್.. ಆರಂಬಾಘ್, ಬಿಷ್ಣಾಪುರ್, ಎಂಟಲ್ಲಿ, ಹೌರಾ, ಬೋಲ್​ಪುರ್​ಗಳಲ್ಲಿ ಹಿಂಸಾಚಾರ ನಡೆದಿದೆ. ಮನೆಯ ಮೇಲೆ ದಾಳಿ ನಡೆಸಲಾಗಿದೆ, ಕಚೇರಿಗಳಿಗೆ ಬೆಂಕಿ ಹಚ್ಚಲಾಗಿದೆ, ಮಹಿಳಾ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ತೃಣಮೂಲ ಕಾಂಗ್ರೆಸ್ 215 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 74 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ರೆ ಎಡಪಕ್ಷಗಳು 2 ಕ್ಷೇತ್ರಗಳಲ್ಲಷ್ಟೇ ಗೆಲುವು ಸಾಧಿಸಿವೆ.

The post ಟಿಎಂಸಿ ಜಯಭೇರಿ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ: ಬಿಜೆಪಿ ಕಚೇರಿಗೆ ಬೆಂಕಿ.. ಕಾರ್ಯಕರ್ತರಿಗೆ ಥಳಿತ appeared first on News First Kannada.

Source: newsfirstlive.com

Source link