ಶಿವಮೊಗ್ಗದಲ್ಲಿನ ಸಾವರ್ಕರ್ ಭಾವಚಿತ್ರದ ವಿವಾದ ಹಿನ್ನಲೆ ಪ್ರತಿಕಾರವಾಗಿ ಕಾಂಗ್ರೆಸ್ ಅಳವಡಿಸಿದ್ದ ಟಿಪ್ಪು ಭಾವ ಚಿತ್ರವನ್ನು ಪುನೀತ್ ಹರಿದಿದ್ದ. ಸದ್ಯ ಪ್ರಕರಣ ಸಂಬಂಧ ಪೊಲೀಸರು, ಚಿಕ್ಕಪ್ಪನ ಮನೆಯಲ್ಲಿ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾಗಿದ್ದ ಪುನೀತ್ ಮತ್ತು ಸ್ನೇಹಿತರನ್ನು ವಶಕ್ಕೆ ಪಡೆದಿದ್ದಾರೆ.

ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟಿಪ್ಪು ಸುಲ್ತಾನ್(Tipu Sulthan) ಭಾವ ಚಿತ್ರ ಇದ್ದ ಬ್ಯಾನರ್ ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೀಣ್ಯದ ನಾಗಸಂದ್ರದಲ್ಲಿ ಹಲಸೂರು ಗೇಟ್ ಠಾಣೆ ಪೊಲೀಸರು ಪುನೀತ್ ವಶಕ್ಕೆ ಪಡೆದಿದ್ದಾರೆ.
ಆಗಸ್ಟ್ 13ರ ರಾತ್ರಿ ನಗರದ ಕೆ.ಆರ್.ವೃತ್ತದಲ್ಲಿ ಹಾಕಿದ್ದ ಕಾಂಗ್ರೆಸ್ನ ಟಿಪ್ಪು ಬ್ಯಾನರ್ ಹರಿದು ಪುನೀತ್ ಕೆರೆಹಳ್ಳಿ ದರ್ಪ ಮೆರೆದಿದ್ದ. ಅಲ್ಲದೆ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಲೈವ್ ಮಾಡಿದ್ದ. ಈ ಬಗ್ಗೆ ಕಾಂಗ್ರೆಸ್ ಮುಖಂಡ ಮಂಜುನಾಥ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಶಿವಮೊಗ್ಗದಲ್ಲಿನ ಸಾವರ್ಕರ್ ಭಾವಚಿತ್ರದ ವಿವಾದ ಹಿನ್ನಲೆ ಪ್ರತಿಕಾರವಾಗಿ ಕಾಂಗ್ರೆಸ್ ಅಳವಡಿಸಿದ್ದ ಟಿಪ್ಪು ಭಾವ ಚಿತ್ರವನ್ನು ಪುನೀತ್ ಹರಿದಿದ್ದ. ಸದ್ಯ ಪ್ರಕರಣ ಸಂಬಂಧ ಪೊಲೀಸರು, ಚಿಕ್ಕಪ್ಪನ ಮನೆಯಲ್ಲಿ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾಗಿದ್ದ ಪುನೀತ್ ಮತ್ತು ಸ್ನೇಹಿತರನ್ನು ವಶಕ್ಕೆ ಪಡೆದಿದ್ದಾರೆ.
ಪುನೀತ್ ಕೆರೆಹಳ್ಳಿ, ಅನಂತ್ ರಾವ್, ಕಿರಣ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣೆಗೆ ಕರೆತಂದು ಬಂಧನ ಪ್ರಕ್ರಿಯೆ ಮುಗಿಸಿದ್ದಾರೆ. ಇಂದು ಸಂಜೆಯ ನಂತರ ನ್ಯಾಯಾಧೀಶರ ನಿವಾಸಕ್ಕೆ ಬಂಧಿತರನ್ನು ಕರೆ ತರಲಾಗುತ್ತೆ.