ನ್ಯೂಜಿಲೆಂಡ್ ವಿರುದ್ದದ ಟಿ20 ಸರಣಿಗಾಗಿ ಟೀಮ್ ಇಂಡಿಯಾ ತಂಡ ಪ್ರಕಟ ಮಾಡಲಾಗಿದೆ. ನಿರೀಕ್ಷೆಯಂತೆ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ಇನ್ನು ಉಪನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ.
16 ಸದಸ್ಯರನ್ನು ಒಳಗೊಂಡಿರುವ ಈ ತಂಡದಲ್ಲಿ ಕೆಲ ಆಟಗಾರರು ಕಂಬ್ಯಾಕ್ ಮಾಡಿದರೆ, ಇನ್ನು ಕೆಲ ಆಟಗಾರರು ಚೊಚ್ಚಲ ಅವಕಾಶ ಪಡೆದಿದ್ದಾರೆ. ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಮೂವರು ಆಟಗಾರರು ಈ ಬಾರಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಇದೇ ಮೊದಲ ಬಾರಿಗೆ ವೆಂಕಟೇಶ್ ಅಯ್ಯರ್, ಹರ್ಷಲ್ ಪಟೇಲ್ ಹಾಗೂ ಅವೇಶ್ ಖಾನ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.
ಐಪಿಎಲ್ನ ಭರ್ಜರಿ ಪ್ರದರ್ಶನದ ಕಾರಣದಿಂದ ವೆಂಕಟೇಶ್ ಅಯ್ಯರ್ಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಕ್ಕಿದೆ. ಇನ್ನು ಆರ್ಸಿಬಿ ಪರ ಅತ್ಯುತ್ತಮವಾಗಿ ಬೌಲಿಂಗ್ ಮಾಡಿ 32 ವಿಕೆಟ್ ಉರುಳಿಸಿದ್ದ ಹರ್ಷಲ್ ಪಟೇಲ್, 24 ವಿಕೆಟ್ ಪಡೆದು 2ನೇ ಯಶಸ್ವಿ ಬೌಲರ್ ಎನಿಸಿಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅವೇಶ್ ಖಾನ್ ಕೂಡ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಮೂವರು ಆಟಗಾರರು ಇದೇ ಮೊದಲ ಬಾರಿಗೆ ಭಾರತೀಯ ತಂಡದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ.
ಇದನ್ನೂ ಓದಿ: ವಿಶ್ವಕಪ್ನಲ್ಲಿ ಭಾರತ ಸೋಲು; ಬಿಸಿಸಿಐ ಆಯ್ಕೆ ಸಮಿತಿಗೆ 5 ಪ್ರಶ್ನೆ ಕೇಳಿದ ಮಾಜಿ ಸೆಲೆಕ್ಟರ್ಸ್