ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ದೀರ್ಘಾವಧಿಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಬೆನ್ನುನೋವಿನಿಂದ ಬಳಲುತ್ತಿರುವ ಕಾರಣ ಹಾರ್ದಿಕ್ ಪಾಂಡ್ಯ ಸದ್ಯದಲ್ಲೇ ಟೆಸ್ಟ್ ಮಾದರಿಯಿಂದ ನಿವೃತ್ತಿಯಾಗುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಹಾರ್ದಿಕ್ ಪಾಂಡ್ಯ ಮೊದಲಿನಂದಲೂ ಇಂಜುರಿಯಿಂದ ಬಳಲುತ್ತಿದ್ದಾರೆ. ಹೀಗಾಗಿ ಟೆಸ್ಟ್ನಿಂದ ನಿವೃತ್ತಿ ಹೊಂದಲು ಬಯಸಿದ್ದಾರೆ ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ. ಆದ್ರೆ, ಪಾಂಡ್ಯ ಈ ಬಗ್ಗೆ ಇನ್ನೂ ಅಧಿಕೃತವಾಗಿ ಮಂಡಳಿಗೆ ತಿಳಿಸಿಲ್ಲ.
ಪಾಂಡ್ಯ ಕಂಬ್ಯಾಕ್ ಮಾಡುವ ಯೋಜನೆಯಲ್ಲಿದ್ದಾರೆ. ಆದರೆ ಗಾಯದ ಕಾರಣ ಈ ಬಾರಿ ಮುಂಬೈ ಇಂಡಿಯನ್ಸ್ ತಂಡದಿಂದ ಕೂಡ ಹೊರಬಿದ್ದಿದ್ದಾರೆ. ಹೀಗಾಗಿ ಏಕದಿನ ಹಾಗೂ ಟಿ20 ಮಾದರಿ ಕ್ರಿಕೆಟ್ ಬಗ್ಗೆ ಗಮನಹರಿಸಲು ಪಾಂಡ್ಯ ಚಿಂತಿಸಿದ್ದಾರೆ.
The post ಟೆಸ್ಟ್ ಕ್ರಿಕೆಟ್ಗೆ ಗುಡ್ ಬೈ ಹೇಳ್ತಾರಾ ಪಾಂಡ್ಯ..? appeared first on News First Kannada.