ಟೆಸ್ಟ್‌ ಕ್ರಿಕೆಟ್‌ನಲ್ಲಿ ಕಿಂಗ್ ಕೊಹ್ಲಿಯ ಮತ್ತೊಂದು ಸಾಧನೆ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಕಿಂಗ್ ಕೊಹ್ಲಿಯ ಮತ್ತೊಂದು ಸಾಧನೆ

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 7500ಕ್ಕೂ ಹೆಚ್ಚು ರನ್ ಕಲೆಹಾಕಿದ ದಾಖಲೆ ಪಟ್ಟಿಗೆ ಕೊಹ್ಲಿ ಸೇರ್ಪಡೆಯಾಗಿದ್ದಾರೆ.

ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ವರ್ಲ್ಡ್ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. 7500ಕ್ಕೂ ಅಧಿಕ ರನ್ ಸಾಧನೆ ಮಾಡಿರುವ ಟೀಮ್ ಇಂಡಿಯಾ ಆಟಗಾರರ ಪಟ್ಟಿಯಲ್ಲಿ, ಕೊಹ್ಲಿ 6ನೇ ಸ್ಥಾನದಲ್ಲಿದ್ದಾರೆ.

ಇನ್ನು ಇದರ ಜೊತೆಗೆ ಇಂಗ್ಲೆಂಡ್ ನೆಲದಲ್ಲಿ 600 ರನ್ ಕಲೆ ಹಾಕಿದ ಭಾರತದ ಮೊದಲ ಕ್ಯಾಪ್ಟನ್ ಅನ್ನೋ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

The post ಟೆಸ್ಟ್‌ ಕ್ರಿಕೆಟ್‌ನಲ್ಲಿ ಕಿಂಗ್ ಕೊಹ್ಲಿಯ ಮತ್ತೊಂದು ಸಾಧನೆ appeared first on News First Kannada.

Source: newsfirstlive.com

Source link