ಗಾಂಧಿನಗರ: ಟ್ರಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ 10 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಗುಜರಾತ್ ನಲ್ಲಿ ನಡೆದಿದೆ.

ಇಂದು ಮುಂಜಾನೆ ಗುಜರಾತ್ ನ ಆನಂದ್ ಜಿಲ್ಲೆಯ ತಾರಪುರ್ ಹೆದಾರಿಯಲ್ಲಿ ಈ ದುರಂತ ನಡೆದಿದೆ. ಕುಟುಂಬದವರು ಕಾರಿನಲ್ಲಿ ಸೂರತ್ ನಿಂದ ಭಾವಂಗರ್ ಕಡೆ ತೆರಳುತ್ತಿದ್ದರು. ಹೀಗೆ ಹೋಗುತ್ತಿದ್ದ ಸಂದರ್ಭದಲ್ಲಿ ಇಂದ್ರನಾಜ್ ಗ್ರಾಮದಲ್ಲಿ ಕಾರ್ ಟ್ರಕ್ ಗೆ ಡಿಕ್ಕಿ ಹೊಡೆದಿದೆ.

ಮಗು ಸಹಿತ ಇಬ್ಬರು ಮಹಿಳೆಯರು ಹಾಗೂ 7 ಮಂದಿ ಪುರುಷರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಘಟನೆ ವಿಚಾರ ತಿಳಿಯುತ್ತಿದ್ದಂತೆಯೇ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿಯರು ಅಲ್ಲಿನ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ. ಅಲ್ಲದೆ ತಕ್ಷಣವೇ ಸಹಾಯ ಮಾಡುವಂತೆ ಸೂಚನೆ ನೀಡಿದ್ದಾರೆ.

The post ಟ್ರಕ್- ಕಾರ್ ಅಪಘಾತಕ್ಕೀಡಾಗಿ ಒಂದೇ ಕುಟುಂಬದ 10 ಮಂದಿ ದುರ್ಮರಣ..! appeared first on Public TV.

Source: publictv.in

Source link