ಟ್ರಾಫಿಕ್ ASI ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ


ಮೈಸೂರು: ನಗರದ ಟ್ರಾಫಿಕ್ ASI ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೌರಿ ಶಂಕರ ನಗರದಲ್ಲಿ ನಡೆದಿದೆ.

ವಿವಿ ಪುರಂ ಟ್ರಾಫಿಕ್ ಠಾಣೆಯ ಎಎಸ್​​​ಐ ಶಿವಕುಮಾರಸ್ವಾಮಿ (54) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್​ ಅಧಿಕಾರಿ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕೆ.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನ ಆರಂಭಿಸಿದ್ದಾರೆ. ಪೊಲೀಸ್ ತನಿಖೆಯಿಂದ ಆತ್ಮಹತ್ಯೆಗೆ ನಿಜವಾದ ಕಾರಣ ಏನು ಅನ್ನೋದು ತಿಳಿದುಬರಲಿದೆ.

The post ಟ್ರಾಫಿಕ್ ASI ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ appeared first on News First Kannada.

News First Live Kannada


Leave a Reply

Your email address will not be published. Required fields are marked *