ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಬಂಡಾಯ ಕವಿ ಡಾ. ಸಿದ್ದಲಿಂಗಯ್ಯ ಇಂದು ಕೊನೆಯುಸಿರೆಳೆದಿದ್ದಾರೆ. ಡಾ. ಸಿದ್ದಲಿಂಗಯ್ಯ ಅವರ ಸಾವಿಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಡಾ. ಸಿದ್ದಲಿಂಗಯ್ಯ ಅವರು ತಮ್ಮ ಸಂಪದ್ಭರಿತ ಬರಹ, ಕಾವ್ಯ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನೀಡಿದ ಕೊಡುಗೆಯಿಂದಾಗಿ ಎಂದಿಗೂ ನೆನಪಿನಲ್ಲಿರುತ್ತಾರೆ. ಅವರ ಸಾವಿನಿಂದಾಗಿ ಬೇಸರವಾಗಿದೆ. ಈ ಸಂದರ್ಭದಲ್ಲಿ ಸಿದ್ದಲಿಂಗಯ್ಯ ಅವರ ಕುಟುಂಬ ಮತ್ತು ಅವರ ಆರಾಧಕರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ ಎಂದಿದ್ದಾರೆ.

ಇನ್ನು ರಾಜ್ಯದ ಹಲವು ನಾಯಕರೂ ಸಹ ಡಾ. ಸಿದ್ದಲಿಂಗಯ್ಯ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮಾಡಿ ಡಾ. ಸಿದ್ದಲಿಂಗಯ್ಯ ಅವರು ವಿಧಿವಶರಾದ ಸುದ್ದಿ ತಿಳಿದು ಅತೀವ ನೋವುಂಟಾಗಿದೆ. ಕನ್ನಡ ಸಾಹಿತ್ಯದ ಶ್ರೇಷ್ಠ ಸಾಧಕರೊಬ್ಬರು ನಮ್ಮನ್ನು ಅಗಲಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನಿ ಟ್ವೀಟ್ ಮಾಡುವ ಮೂಲಕ ಸಿದ್ದಲಿಂಗಯ್ಯ ಅವರ ಸಾವಿಗೆ ಸಂತಾಪ ಸೂಚಿಸಿದ್ದು ದಲಿತರನ್ನು ಜಾಗೃತಗೊಳಿಸುವಲ್ಲಿ ಡಾ. ಸಿದ್ದಲಿಂಗಯ್ಯನವರ ಕೊಡುಗೆ ಅಪಾರ ಎಂದಿದ್ದಾರೆ.

ಪಂಪ, ನಾಡೋಜ ಪ್ರಶಸ್ತಿ ಪುರಸ್ಕೃತ ಖ್ಯಾತ ಕವಿ ಮತ್ತು ಮಾಜಿ ವಿಧಾನಪರಿಷತ್ ಸದಸ್ಯರಾದ ಡಾ.ಸಿದ್ದಲಿಂಗಯ್ಯ ಅವರ ನಿಧನದಿಂದ ಈ ನಾಡಿಗೆ ಬಹುದೊಡ್ಡ ನಷ್ಟವಾಗಿದೆ . ದಲಿತ ಪರ ಹೋರಾಟದ ಮೂಲಕವೇ ಶ್ರಮಿಕರ ನೋವಿಗೆ ದನಿಯಾಗಿದ್ದ ಸಿದ್ದಲಿಂಗಯ್ಯ ಧೀಮಂತ ನಾಯಕರಾಗಿದ್ದರು. ಮೃತರಿಗೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಸಚಿವರಾದ ಸಿ.ಪಿ.ಯೋಗೇಶ್ವರ ಅವರು ಸಂತಾಪ ಸೂಚಿಸಿದ್ದಾರೆ.

The post ಡಾ. ಸಿದ್ದಲಿಂಗಯ್ಯ ಅವರು ತಮ್ಮ ಸಂಪದ್ಭರಿತ ಬರಹದಿಂದಾಗಿ ಸದಾ ನೆನಪಿನಲ್ಲಿರುತ್ತಾರೆ- ಮೋದಿ appeared first on News First Kannada.

Source: newsfirstlive.com

Source link

Leave a Reply