ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕುಟುಂಬಸ್ಥರೆಲ್ಲರಿಗೂ ಕೊರೊನಾ ಪಾಸಿಟಿವ್ ಆಗಿದ್ದು, ರೋಹಿಣಿ ಸಿಂಧೂರಿ ಅವರಿಗೆ ಮಾತ್ರ ನೆಗೆಟಿವ್ ರಿಪೋರ್ಟ್ ಬಂದಿದೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ತಂದೆ-ತಾಯಿ, ಅತ್ತೆ-ಮಾಮ ಹಾಗೂ ಪತಿ ಎಲ್ಲರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಎಲ್ಲರೂ ಹೋಂ ಐಸೋಲೇಷನ್‍ನಲ್ಲಿದ್ದಾರೆ. ಕುಟುಂಬಸ್ಥರಿಗೆಲ್ಲ ಪಾಸಿಟಿವ್ ಆಗಿದ್ದರಿಂದ ಡಿಸಿ ರೋಹಿಣಿ ಸಹ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು, ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಎಲ್ಲರಿಗೂ ಪಾಸಿಟಿವ್ ಆದರೂ ಇವರಿಗೆ ಮಾತ್ರ ಕೊರೊನಾ ನೆಗೆಟಿವ್ ಆಗಿದೆ.

ಮುಂಜಾಗ್ರತೆ ವಹಿಸಿದ ಕಾರಣ ಕುಟುಂಬಸ್ಥರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಎಲ್ಲರೂ ಹೋಮ್ ಐಸೋಲೇಶನ್‍ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಹಿಣಿ ಸಿಂಧೂರಿ ಅವರು ಜಿಲ್ಲೆಯಲ್ಲೊ ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದು, ದಣಿವರಿಯದೆ ಕೆಲಸ ಮಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕುಟುಂಬಸ್ಥರಿಗೆ ಪಾಸಿಟಿವ್ ಆಗಿದೆ.

The post ಡಿಸಿ ರೋಹಿಣಿ ಸಿಂಧೂರಿ ಇಡೀ ಕುಟುಂಬ ಕೊರೊನಾ ಪಾಸಿಟಿವ್ appeared first on Public TV.

Source: publictv.in

Source link