ಡಿಸೆಂಬರ್ ಅಂತ್ಯದೊಳಗೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುವಂತೆ ಹೈಕೋರ್ಟ್​ ನಿರ್ದೇಶನ


ಬೆಂಗಳೂರು: ಡಿಸೆಂಬರ್ ಅಂತ್ಯದೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ‌ ಹೈಕೋರ್ಟ್ ನಿರ್ದೇಶನ ನೀಡಿದೆ.

ನ.26 ರೊಳಗೆ ಮೀಸಲಾತಿ ಒದಗಿಸಿ, ಡಿಸೆಂಬರ್​ 30 ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠ ಸೂಚಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಹಿನ್ನೆಲೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಹಾಜರಾಗಿದ್ದು ನವೆಂಬರ್​ 26 ರೊಳಗೆ ಮೀಸಲಾತಿ ಅಧಿಸೂಚನೆ ಹೊರಡಿಸುತ್ತೇವೆ ಎಂದು ಹೈಕೋರ್ಟ್​ಗೆ ತಿಳಿಸಿದ್ದಾರೆ.

ನವೆಂಬರ್​ 26 ರೊಳಗೆ ಮೀಸಲಾತಿ ನೀಡಿದರೆ ಡಿಸೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸಲಾಗುವುದು ಎಂದು ಚನಾವಣಾ ಆಯೋಗದ ಪರ ವಕೀಲ ಕೆ.ಎನ್.ಫಣೀಂದ್ರ ಹೇಳಿಕೆ ನೀಡಿದ್ದು ಹೇಳಿಕೆ ದಾಖಲಿಸಿಕೊಂಡು ಹೈಕೋರ್ಟ್ ನಿರ್ದೇಶನ ನೀಡಿದೆ.

ಇದನ್ನೂ ಓದಿ:ಸಿಲಿಕಾನ್​​ ಸಿಟಿಯಲ್ಲಿ ಮೀತಿ ಮೀರಿದ ಶಬ್ದ ಮಾಲಿನ್ಯ; ತರಾಟೆ ತೆಗೆದುಕೊಂಡ ಹೈಕೋರ್ಟ್​

News First Live Kannada


Leave a Reply

Your email address will not be published. Required fields are marked *