ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರ ಕಾಂಗ್ರೆಸ್ ಮುಖಂಡರು ದಾವಣಗೆರೆಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಹೆಲಿಕಾಪ್ಟರ್, ಪ್ರತಿಕೂಲ ಹವಾಮಾನದಿಂದಾಗಿ ನೆಲಮಂಗಲದ ಟಿ. ಬೇಗೂರು ಬಳಿ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿದೆ.

ಹೆಲಿಕಾಪ್ಟರ್​​ನಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸಲೀಂ ಅಹಮದ್ ಹಾಗೂ ಎಂಎಲ್ಸಿ ಯು.ಬಿ. ವೆಂಕಟೇಶ್ ಇದ್ದರು. ಮಧ್ಯಾಹ್ನ ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಆಯೋಜಿಸಿದ್ದ ಕೋವಿಡ್ ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡು ಕಾಂಗ್ರೆಸ್​ ನಾಯಕರು ವಾಪಸ್​ ಆಗುತ್ತಿದ್ದರು.

ವಿಪರೀತ ಮಳೆಯ ಕಾರಣ ಪ್ರತಿಕೂಲ ಹವಾಮಾನದಿಂದಾಗಿ ಹೆಲಿಕಾಪ್ಟರ್ ಇಳಿಯಲು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಅನುಮತಿ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ನೆಲಮಂಗಲದ ಟಿ. ಬೇಗೂರಲ್ಲಿ ಕಾಪ್ಟರ್ ಲ್ಯಾಂಡ್​ ಆಗಿದೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಂಗಳೂರಿನತ್ತ ಕಾಂಗ್ರೆಸ್​ ನಾಯಕರು ಬರುತ್ತಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ.

The post ಡಿ.ಕೆ ಶಿವಕುಮಾರ್ & ಕೈನಾಯಕರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ, ಎಲ್ಲರೂ ಸುರಕ್ಷಿತ appeared first on News First Kannada.

Source: newsfirstlive.com

Source link