ಅಬುಧಾಬಿ: ಫೀಲ್ಡಿಂಗ್ ವೇಳೆ ಸಹ ಆಟಗಾರನಿಗೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಾಕಿಸ್ತಾನ ಸೂಪರ್ ಲೀಗ್ ನಲ್ಲಿ ಆಡುತ್ತಿರುವ ಫಾಫ್ ಡು ಪ್ಲೆಸಿಸ್ ಕ್ವೆಟ್ಟಾ ಗ್ಲಾಡಿಯೇಟರ್ಸ್ ಪರವಾಗಿ ಆಡುತ್ತಿದ್ದಾರೆ. ಶನಿವಾರ ಪೇಶಾವರ ತಂಡದ ವಿರುದ್ಧ ನಡೆಯುತ್ತಿದ್ದ ಪಂದ್ಯದ ವೇಳೆ ಪಾಕ್ ಆಟಗಾರ ಮೊಹಮ್ಮದ್ ಹಸ್ನೈನ್ ಗೆ ಢಿಕ್ಕಿ ಹೊಡೆದಿದ್ದಾರೆ.

ಏಳನೇ ಓವರ್ ವೇಳೆ ಬೌಂಡರಿ ತಡೆಯಲು ಫಾಫ್ ಡೈವ್ ಹೊಡೆದಿದ್ದಾರೆ. ಈ ವೇಳೆ ಎದುರಿನಿಂದ ಬಂದ ಹಸ್ನೈನ್ ಕಾಲು ಗಂಟಿಗೆ ಫಾಫ್ ತಲೆ ಬಡಿದಿದ್ದು, ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ.

ಗಂಭೀರವಾಗಿ ತಲೆಗೆ ಏಟು ಬಿದ್ದ ನಂತರ ಅವರನ್ನು ಅಬುಧಾಬಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ : ಅಂದು ಧೋನಿಯೊಂದಿಗಿದ್ದ ಪುಟ್ಟ ಬಾಲಕ ಇಂದು ಸ್ಟಾರ್ ಕ್ರಿಕೆಟರ್! 

ಫಾಫು ಡು ಪ್ಲೆಸಿಸ್ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಈಗ ಟ್ರೆಂಡಿಂಗ್ ಟಾಪಿಕ್ ಆಗಿದ್ದು ಅಭಿಮಾನಿಗಳು ಶೀಘ್ರವಾಗಿ ಗುಣಮುಖವಾಗುವಂತೆ ಹಾರೈಸುತ್ತಿದ್ದಾರೆ.

The post ಡೈವಿಂಗ್ ವೇಳೆ ಆಟಗಾರನಿಗೆ ಡಿಕ್ಕಿ – ಫಾಫ್ ಡು ಪ್ಲೆಸಿಸ್ ಆಸ್ಪತ್ರೆಗೆ ದಾಖಲು appeared first on Public TV.

Source: publictv.in

Source link