ಬೆಂಗಳೂರು: ಕರ್ನಾಟಕ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶ, ಕೇರಳದಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನಲ್ಲಿ ದಿನದಿಂದ ದಿನಕ್ಕೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಚೆನ್ನೈ, ಕಾಂಚೀಪುರಂ, ತಿರುವಳ್ಳೂರ್ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜೊತೆಗೆ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಆಂಧ್ರಪ್ರದೇಶ, ಪುದುಚೇರಿ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಅಂತ ಐಎಂಡಿ ಮಾಹಿತಿ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮಳೆರಾಯ ಆರ್ಭಟಿಸುತ್ತಿದ್ದಾನೆ. ಬೆಂಗಳೂರಲ್ಲೂ ಕೂಡ ಮಳೆ ಆಗಾಗ ಬರುತ್ತಿದೆ. ಅಲ್ಲದೇ ಶೀತವಾತಾವರಣ ಮುಂದುವರಿದಿದೆ.