ತಮಿಳುನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಲ್ಲಿ ನ.12ರಂದು ಶಾಲಾ-ಕಾಲೇಜುಗಳಿಗೆ ರಜೆ, ಹಲವೆಡೆ ರೆಡ್ ಅಲರ್ಟ್ – Tamil Nadu 23 districts schools colleges will be closed On nov 12 due to heavy rain


ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತದ ಪ್ರಭಾವದಿಂದ ತಮಿಳುನಾಡಿನಾದ್ಯಂತ(Tamil Nadu ) ನಿನ್ನೆ(ನ.10) ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಮಳೆ(Rain) ಆರ್ಭಟ ನಾಳೆಯೂ(ನ.12) ಸಹ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೂಚನೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನ 23 ಜಿಲ್ಲೆಗಳಲ್ಲಿ ನವೆಂಬರ್ 12ರಂದು ಶಾಲಾ-ಕಾಲೇಜುಗಳಿಗೆ (schools and colleges) ರಜೆ ಘೋಷಿಸಲಾಗಿದೆ. ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದ್ದು, ಮುಂಜಾಗ್ರತಾವಾಗಿ 23 ಜಿಲ್ಲೆಗಳಲ್ಲಿ ಶಾಲಾ […]

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತದ ಪ್ರಭಾವದಿಂದ ತಮಿಳುನಾಡಿನಾದ್ಯಂತ(Tamil Nadu ) ನಿನ್ನೆ(ನ.10) ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಮಳೆ(Rain) ಆರ್ಭಟ ನಾಳೆಯೂ(ನ.12) ಸಹ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೂಚನೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನ 23 ಜಿಲ್ಲೆಗಳಲ್ಲಿ ನವೆಂಬರ್ 12ರಂದು ಶಾಲಾ-ಕಾಲೇಜುಗಳಿಗೆ (schools and colleges) ರಜೆ ಘೋಷಿಸಲಾಗಿದೆ.

ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದ್ದು, ಮುಂಜಾಗ್ರತಾವಾಗಿ 23 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು, ವೆಲ್ಲೂರು, ರಾಣಿಪೇಟ್​, ಕಡಲೂರು, ಮೈಲಾಡುತುರೈ, ತಿರುವರೂರು ನಾಗಪಟ್ಟಣಂ, ತಂಜಾವೂರು, ವಿಲ್ಲುಪುರಂ ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನೇನು ಮಳೆಗಾಲ ಮುಗಿತು. ಚಳಿಗಾ ಶುರುವಾಯ್ತು ಅನ್ನೋ ಹೊತ್ತಿಗೆ ವರುಣನ ಅಬ್ಬರ ಜೋರಾಗಿದೆ. ಕಳೆದೊಂದು ದಿನದಿಂದ ಸುರಿಯುತ್ತಿರುವ ಭಾರೀ ಮಳೆಗೆ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ರಸ್ತೆಗಳು ಜಲಾವೃತಗೊಂಡು ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ನಾಳೆಯೂ ಕೂಡ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದರಿಂದ ಜನ ಆತಂಕಗೊಳ್ಳುವಂತೆ ಮಾಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.