ತಮಿಳುನಾಡಿನಲ್ಲಿ ಸ್ಥಳೀಯ ಚುನಾವಣೆ; ತೃತೀಯ ಲಿಂಗಿಗಳಿಗೆ ಟಿಕೆಟ್​ ಕೊಟ್ಟ ಬಿಜೆಪಿ & AIADMK


ತಮಿಳುನಾಡಿನಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಲು ಬಿಜೆಪಿ ಮತ್ತು ಎಐಎಡಿಎಂಕೆ ನಿರ್ಧರಿಸಿವೆ. ಇದೀಗ ಎರಡೂ ಪಕ್ಷಗಳೂ ಮತ್ತೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಲವು ವಾರ್ಡ್​​ಗಳಲ್ಲಿ ತೃತೀಯ ಲಿಂಗಿಗಳಿಗೆ ಟಿಕೆಟ್ ನೀಡಿದೆ.

ರಾಜ್ಯದ 12,838 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಇದರಲ್ಲಿ 1,374 ನಗರಪಾಲಿಕೆ ವಾರ್ಡ್​ಗಳು, 3,843 ಪುರಸಭೆ ವಾರ್ಡ್​ಗಳು, 7,621 ಪಟ್ಟಣ ಪಂಚಾಯತ್​ ವಾರ್ಡ್​ಗಳಿಗೆ ಚುನಾವಣೆ ನಡೆಯಲಿದೆ. ಅದರಂತೆ ಸೌಥ್ ಚೆನ್ನೈನಿಂದ ಎಐಎಡಿಎಂಕೆ ಅಭ್ಯರ್ಥಿ ಎನ್​.ಜಯದೇವಿ ನಾಮಿನೇಷನ್ ಸಲ್ಲಿಸಿದ್ರೆ, ತಿರುವಿಕಾ ನಗರದ ವಾರ್ಡ್​ ನಂಬರ್ 76ರ ಬಿಜೆಪಿ ಅಭ್ಯರ್ಥಿಯಾಗಿ ರಾಜಮ್ಮ ಕಣಕ್ಕೆ ಇಳಿದಿದ್ದಾರೆ.

ಇದೇ ವೇಳೆ ಬಿಜೆಪಿಯ ಅಭ್ಯರ್ಥಿಯಾದ ತೃತೀಯಲಿಂಗಿ ರಾಜಮ್ಮ ಮಾತನಾಡಿ ನನ್ನ ಸಮುದಾಯಕ್ಕೆ ನಾನು ಒಳ್ಳೆಯ ಮಾದರಿಯಾಗುತ್ತೇನೆ. ನಾನು ಆಯ್ಕೆಯಾದರೆ ಕುಡಿಯುವ ನೀರು, ಚರಂಡಿ ಸಮಸ್ಯೆ ಇಂತಹ ಜನರ ಬೇಡಿಕೆಗಳನ್ನು ಈಡೇರಿಸುತ್ತೇನೆ ಎಂದಿದ್ದಾರೆ.

ಇನ್ನು ಎಐಎಡಿಎಂಕೆ ಅಭ್ಯರ್ಥಿಯಾದ ತೃತೀಯಲಿಂಗಿ ಜಯದೇವಿ ನಾನು ಆಯ್ಕೆಯಾದರೆ ನನ್ನ ವಾರ್ಡ್ಅನ್ನು ಇತರರಿಗೆ ಮಾದರಿಯಾಗುವ ರೀತಿ ಮಾಡುತ್ತೇನೆ ಎಂದು ಜನರಿಗೆ ಭರವಸೆ ನೀಡಿದ್ದಾರೆ.

News First Live Kannada


Leave a Reply

Your email address will not be published.