ತಾಯಿ ಆಗುತ್ತಿದ್ದಾರೆ ನಟಿ ಅಮೂಲ್ಯ; ವಿಶೇಷ ಫೋಟೋ ಮೂಲಕವೇ ಗುಡ್​ ನ್ಯೂಸ್​ ನೀಡಿದ ದಂಪತಿ | Actress Amulya Jagadish announce her pregnancy with new photo


ತಾಯಿ ಆಗುತ್ತಿದ್ದಾರೆ ನಟಿ ಅಮೂಲ್ಯ; ವಿಶೇಷ ಫೋಟೋ ಮೂಲಕವೇ ಗುಡ್​ ನ್ಯೂಸ್​ ನೀಡಿದ ದಂಪತಿ

ಅಮೂಲ್ಯ-ಜಗದೀಶ್

ಕನ್ನಡದ ಖ್ಯಾತ ನಟಿ ಅಮೂಲ್ಯ ( Amulya,) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ತಾವು ಪ್ರೆಗ್ನೆಂಟ್​ (Amulya Pregnan) ಎಂಬ ವಿಚಾರವನ್ನು ಅವರು ಬಹಿರಂಗಪಡಿಸಿದ್ದಾರೆ. ಪತಿ ಜಗದೀಶ್​ (Amulya husband Jagadish) ಜತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು, ಸೋಶಿಯಲ್​ ಮೀಡಿಯಾ ಮೂಲಕ ಅಮೂಲ್ಯ ಸಿಹಿ ಸುದ್ದಿ ನೀಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಕೋರುತ್ತಿದ್ದಾರೆ. ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಅಮೂಲ್ಯ ಅವರು ಇತ್ತೀಚಿನ ದಿನಗಳಲ್ಲಿ ಯಾವುದೇ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಸಂಸಾರದ ಕಡೆಗೆ ಅವರು ಹೆಚ್ಚು ಗಮನ ನೀಡಿದ್ದಾರೆ. ಈಗ ಅವರು ತಾಯಿ ಆಗುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಸದ್ಯ ಅವರ ಹೊಸ ಈ ಫೋಟೋ ಅಭಿಮಾನಿಗಳ ವಲಯದಲ್ಲಿ ಸಖತ್​ ವೈರಲ್​ ಆಗುತ್ತಿದೆ.

 

TV9 Kannada


Leave a Reply

Your email address will not be published. Required fields are marked *