ತಾಯಿ, ಶಿಶುಗಳ ಸಾವಿಗೆ ಕಾರಣರಾದ ಆರೋಗ್ಯ ಸಚಿವ ತಕ್ಷಣ ರಾಜೀನಾಮೆ ನೀಡಲಿ: ಸುಧಾಕರ್ ವಿರುದ್ಧ ಸಿದ್ದರಾಮಯ್ಯ ಕಿಡಿ – Case of death of mother and baby due to negligence of district hospital Tumkur


ತಾಯಿ, ಶಿಶುಗಳ ಸಾವಿಗೆ ಕಾರಣಕರ್ತರಾದ ಆರೋಗ್ಯ ಸಚಿವ ಸುಧಾಕರ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಚಿವ ಸುಧಾಕರ್ ವಿರುದ್ಧ ಟ್ವೀಟ್ ಮಾಡಿದ್ದಾರೆ.

ತಾಯಿ, ಶಿಶುಗಳ ಸಾವಿಗೆ ಕಾರಣರಾದ ಆರೋಗ್ಯ ಸಚಿವ ತಕ್ಷಣ ರಾಜೀನಾಮೆ ನೀಡಲಿ: ಸುಧಾಕರ್ ವಿರುದ್ಧ ಸಿದ್ದರಾಮಯ್ಯ ಕಿಡಿ

ವಿಪಕ್ಷ ನಾಯಕ ಸಿದ್ದರಾಮಯ್ಯ, ಆರೋಗ್ಯ ಸಚಿವ ಸುಧಾಕರ್

ಬೆಂಗಳೂರು: ತಾಯಿ, ಶಿಶುಗಳ ಸಾವಿಗೆ ಕಾರಣಕರ್ತರಾದ ಆರೋಗ್ಯ ಸಚಿವ ಸುಧಾಕರ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಚಿವ ಸುಧಾಕರ್ ವಿರುದ್ಧ ಟ್ವೀಟ್ ಮಾಡಿದ್ದಾರೆ. ಆರೋಪಿ ವೈದ್ಯರನ್ನು ಸೇವೆಯಿಂದ ವಜಾಗೊಳಿಸಬೇಕು. ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹಿಸಿದರು. ಕೊರೊನಾ ಕಾಲದಿಂದ ಆರೋಗ್ಯ ಇಲಾಖೆಯ ಬೇಜವಾಬ್ದಾರಿಗೆ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಸುಧಾಕರ್ ಅವರೇ​ ಆರೋಗ್ಯ ಸಚಿವರಾಗಿ ಮುಂದುವರೆದರೆ, ಸರಣಿ ವೈದ್ಯಕೀಯ ಹತ್ಯೆಗಳು ಮುಂದುವರಿಯುವ ಸಾಧ್ಯತೆಗಳಿವೆ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ನೇಮಕಾತಿಯಿಂದ ಹಿಡಿದು ವರ್ಗಾವಣೆ ವರೆಗೆ ಎಲ್ಲವೂ ದುಡ್ಡಿನ ಬಲದಿಂದಲೇ ನಡೆಯುತ್ತಿರುವ ಕಾರಣ ಯಾವ ಅಧಿಕಾರಿಯೂ ಯಾವ ಸಚಿವರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಕರ್ತವ್ಯಭ್ರಷ್ಟ ಅಧಿಕಾರಿಗಳನ್ನು ಪ್ರಶ್ನಿಸುವ-ಶಿಕ್ಷಿಸುವ ನೈತಿಕತೆ
ಬಿಜೆಪಿ ಭ್ರಷ್ಟ ಸಚಿವರಿಗೂ ಇಲ್ಲದಂತಾಗಿದೆ. ಗುಂಡಿಬಿದ್ದ ರಸ್ತೆಗಳಲ್ಲಿ ಜನ ಬಿದ್ದು ಸಾಯುತ್ತಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದವರೂ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 40% ಕಮಿಷನ್ ನೀಡಲಿಕ್ಕಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡು ಸಾಯುತ್ತಿದ್ದಾರೆ. ಸರ್ಕಾರ ಜನರನ್ನು ಸಾಯಿಸುವ ಸರ್ಕಾರವೇ ಹೊರತು ಬದುಕಿಸುವ ಸರ್ಕಾರ ಅಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ತುಮಕೂರು ಜಿಲ್ಲಾಸ್ಪತ್ರೆಗೆ ಸಚಿವ ಡಾ. ಕೆ ಸುಧಾಕರ್‌ ಭೇಟಿ 

ಇನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ರಾತ್ರಿ 9.30 ಸುಮಾರಿಗೆ ಭೇಟಿ ನೀಡಲಿದ್ದು, ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ವೈದ್ಯರ ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ನಿನ್ನೆ ಸಂಜೆ ಜಿಲ್ಲಾಸ್ಪತ್ರೆಗೆ ದಾಖಲಾಗಲು ಬಂದಿದ್ದ ಗರ್ಭಿಣಿ ಮಹಿಳೆ ಕಸ್ತೂರಿ. ಇಂದು ಬೆಳಿಗ್ಗೆ ಮನೆಯಲ್ಲಿ ಹೆರಿಗೆ ಬಳಿಕ ಅವಳಿ ಮಕ್ಕಳು ಹಾಗೂ ತಾಯಿ ಸಾವನ್ನಪ್ಪಿದ್ದಾರೆ. ದಾಖಲೆಗಳು ಇಲ್ಲವೆಂದು ಸಿಬ್ಬಂದಿ ವಾಪಸ್ ಕಳಿಸಿದ್ದರು. ಆರೋಗ್ಯ ಇಲಾಖೆ ಪ್ರಕರಣ ಗಂಭೀರವಾಗಿ ಪರಿಗಣಿಸಿದೆ. ಒಂದು ವೇಳೆ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದರೇ ತಾಯಿ ಮಕ್ಕಳು ಬದುಕುಳಿತ್ತಿದ್ದರು‌.

ಜಿಲ್ಲಾಸ್ಪತ್ರೆ ವೈದ್ಯೆ, ಸಿಬ್ಬಂದಿ ಅಮಾನತು: ಡಾ.ಮಂಜುನಾಥ್ 

ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುನಾಥ್ ಹೇಳಿಕೆ ನೀಡಿದ್ದು, ಕರ್ತವ್ಯ ಲೋಪ ಆಗಿರುವುದು ಕಂಡು ಬಂದಿದೆ. ವೈದ್ಯೆ, ಸಿಬ್ಬಂದಿ ಅಮಾನತುಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಟಿವಿ9ಗೆ ತುಮಕೂರು ಡಿಹೆಚ್​ಒ ಡಾ.ಮಂಜುನಾಥ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ

TV9 Kannada


Leave a Reply

Your email address will not be published.