ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ; ಕೊಪ್ಪಳದಲ್ಲಿರುವ ಶ್ರೀಕೃಷ್ಣದೇವರಾಯ ಮಂಟಪ ಜಲಾವೃತ | Enormous water has been released from the Tungabhadra Dam and Sri Krishnadevaraya Mandapa is a water body at koppal


ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾದ ಹಿನ್ನೆಲೆ ನದಿಪಾತ್ರದಲ್ಲಿರುವ 64 ಕಂಬಗಳ ಹೊಂದಿರುವ ಶ್ರೀಕೃಷ್ಣದೇವರಾಯ ಮಂಟಪ ಜಲಾವೃತವಾಗಿದೆ. ಗಂಗಾವತಿ ತಾಲೂಕಿನ ಬಳಿಯ ನವವೃಂದಾವನ ಗಡ್ಡೆಗೆ ಸಂಪರ್ಕ ಕಡಿತವಾಗಿದೆ. ಜಲಾಶಯದಿಂದ ಈಗ 45 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ. ಹೀಗಾಗಿ ಇಂದು (ನ.20) ಇನ್ನಷ್ಟು ಹೊರಹರಿವು ಹೆಚ್ಚಳವಾಗುವ ಸಾಧ್ಯತೆಯಿದೆ. ಇನ್ನು ಕೊಪ್ಪಳದಲ್ಲಿ ಮಳೆ ಆರ್ಭಟಕ್ಕೆ ಅಪಾರ ಭತ್ತದ ಬೆಳೆ ಹಾನಿಯಾಗಿದೆ. ಭತ್ತದ ಬೆಳೆ ಹಾನಿಯಾದರೂ ರೈತರು ಆತಂಕಪಡಬೇಕಾಗಿಲ್ಲ. ಬೆಳೆ ಹಾನಿ ಬಗ್ಗೆ ಕೃಷಿ ಸಚಿವರ ಗಮನಕ್ಕೆ ತರಲಾಗಿದೆ. ಬೆಳೆಹಾನಿ ವರದಿ ಸಂಗ್ರಹಕ್ಕೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಸಂಕಷ್ಟಕ್ಕೀಡಾದ ರೈತರ ಹಿತ ಕಾಯಲು ಸರ್ಕಾರ ಬದ್ಧ. ರೈತರಿಗೆ ಖಂಡಿತವಾಗಿ ಪರಿಹಾರ ಕೊಡಿಸುತ್ತೇವೆ ಅಂತ ಕಾರಟಗಿಯಲ್ಲಿ ಶಾಸಕ ಬಸವರಾಜ್ ದಡೇಸೂಗೂರು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

TV9 Kannada


Leave a Reply

Your email address will not be published. Required fields are marked *