ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಅವಳಿ ಗಂಡು ಮಕ್ಕಳ ಜೊತೆ ತಾಯಿನೂ ಸಾವು – Mother dies along with twin sons due to negligence of doctors at Tumakuru district hospital


ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮೂವರು ಬಲಿಯಾಗಿರುವಂತಹ ಘಟನೆ ಜಿಲ್ಲೆಯ ಭಾರತಿನಗರದ ಆಂಜನೇಯ ದೇಗುಲ ಬಳಿ ನಡೆದಿದೆ. ಬಾಣಂತಿ ಕಸ್ತೂರಿ(30), ಅವಳಿ ಮಕ್ಕಳು ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಅವಳಿ ಗಂಡು ಮಕ್ಕಳ ಜೊತೆ ತಾಯಿನೂ ಸಾವು

ಪ್ರಾತಿನಿಧಿಕ ಚಿತ್ರ

TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Nov 03, 2022 | 3:09 PM
ತುಮಕೂರು: ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮೂವರು ಬಲಿ (death) ಯಾಗಿರುವಂತಹ ಘಟನೆ ಜಿಲ್ಲೆಯ ಭಾರತಿನಗರದ ಆಂಜನೇಯ ದೇಗುಲ ಬಳಿ ನಡೆದಿದೆ. ಬಾಣಂತಿ ಕಸ್ತೂರಿ(30), ಅವಳಿ ಮಕ್ಕಳು ಮೃತಪಟ್ಟಿದ್ದಾರೆ. ತಮಿಳುನಾಡು ಮೂಲದ ಕಸ್ತೂರಿ 1 ತಿಂಗಳಿಂದ ಓರ್ವ ಪುತ್ರಿ ಜತೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಗರ್ಭಿಣಿ ಕಸ್ತೂರಿಗೆ ನಿನ್ನೆ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಸ್ಥಳೀಯರು ಆಟೋದಲ್ಲಿ ತುಮಕೂರು ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು. ತಾಯಿ ಕಾರ್ಡ್​, ಆಧಾರ್​ ಕಾರ್ಡ್​ ಇಲ್ಲವೆಂದು ದಾಖಲಿಸಿಕೊಳ್ಳಲು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದು, ನಾವು ಚಿಕಿತ್ಸೆ ನೀಡಲ್ಲ ಎಂದು ವೈದ್ಯರು ಕೂಡ ನಿರಾಕರಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಿರಿ ಎಂದು ಸಿಬ್ಬಂದಿ ಹೇಳಿದ್ದು, ಬೆಂಗಳೂರಿಗೆ ತೆರಳಲು ಹಣವಿಲ್ಲದೆ ಕಸ್ತೂರಿ ಮನೆಗೆ ಹಿಂದಿರುಗಿದ್ದಾರೆ. ಇಂದು ಮುಂಜಾನೆ ಒಂದು ಮಗುವಿಗೆ ಜನ್ಮ ನೀಡಿದ್ದು, ಮತ್ತೊಂದು ಮಗುವಿಗೆ ಜನ್ಮನೀಡುವಾಗ ರಕ್ತಸ್ರಾವವಾಗಿ ಅವಳಿ ಗಂಡು ಮಕ್ಕಳು, ತಾಯಿ ಕಸ್ತೂರಿ(30) ಸಾವನ್ನಪ್ಪಿದ್ದಾರೆ. ತಾಯಿ, ಮಕ್ಕಳ ಸಾವಿಗೆ ಜಿಲ್ಲಾಸ್ಪತ್ರೆ ವೈದ್ಯರೇ ಕಾರಣವೆಂದು ಸ್ಥಳೀಯರು ಆರೋಪಿಸಿದ್ದು, ತುಮಕೂರಿನ ಎನ್​ಇಪಿಎಸ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.