ಹಾವೇರಿ: ಮನೆಯ ಮುಂದೆ ಮರ ನೆಟ್ಟಿದ್ದರೆ ಹುಷಾರಾಗಿರಿ. ಮನೆಯ ಮುಂದಿನ ತೆಂಗಿನ ಮರದಿಂದ ಕಾಯಿ ಬಿದ್ದು ಪುಟ್ಟ ಕಂದಮ್ಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕು ಹಂಸಭಾವಿ ಗ್ರಾಮದಲ್ಲಿ ನಡೆದಿದೆ.

ಮೃತ ಹಸಗೂಸನ್ನ 11 ತಿಂಗಳಿನ ತನ್ವೀತ್ ವಾಲ್ಮೀಕಿ ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಮತ್ತು ಮಾಲಾ ದಂಪತಿಯ ಮಗು. ಸೋಮವಾರ ಬೆಳಗ್ಗೆ ಮನೆಯ ಮುಂದೆ ಮಗುವನ್ನ ಎತ್ತಿಕೊಂಡು ಊಟ ಮಾಡಿಸುತ್ತಿದ್ದ ವೇಳೆ ತೆಂಗಿನಮರದ ಕಾಲ ಕಾಯಿ ಬಿದ್ದು ಈ ದುರ್ಘಟನೆ ನಡೆದಿದೆ.

ಮಗುವಿನ ತಲೆಯ ಭಾಗದ ಮೇಲೆ ಭಾರವಾದ ತೆಂಗಿನಕಾಯಿ ಬಿದ್ದಿದೆ. ಕೂಡಲೇ ಮಗುವನ್ನ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ 11 ತಿಂಗಳ ಹಸಗೂಸು ಮೃತಪಟ್ಟಿದೆ. ಮಗು ಕಳೆದುಕೊಂಡ ತಂದೆ-ತಾಯಿ ಹಾಗೂ ಕುಟುಂಬ ಸದಸ್ಯರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಹಂಸಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

The post ತೆಂಗಿನಮರದ ಕಾಯಿ ಬಿದ್ದು 11 ತಿಂಗಳ ಹಸುಗೂಸು ಸಾವು appeared first on Public TV.

Source: publictv.in

Source link